ಬೆಂಗಳೂರು: ಮಹಿಳಾ ಪ್ರಯಾಣಿಕರ ಸುರಕ್ಷತೆ ಹಾಗೂ ಭದ್ರತೆಗಾಗಿ‘ನಿರ್ಭಯಾ’ ಯೋಜನೆಯಡಿಯಲ್ಲಿ ಬಿಎಂಟಿಸಿ ‘ಪಿಂಕ್ ಸಾರಥಿ’ ಸೇವೆ ಆರಂಭಿಸಲಿದೆ.
ಇದಕ್ಕಾಗಿ ₹56.7 ಕೋಟಿ ಅನುದಾನ ನೀಡಿದೆ. ಇದರಲ್ಲಿ 25 ಮಹೀಂದ್ರಾ ಬೊಲೆರೊ ವಾಹನಗಳನ್ನು ಖರೀದಿಸಿದ್ದು, ‘ಪಿಂಕ್ ಸಾರಥಿ’ ಎಂದು ಹೆಸರಿಡಲಾಗಿದೆ. ಈ ವಾಹನಗಳಲ್ಲಿ ಜಿಪಿಎಸ್ ನಿರ್ವಹಣೆ ಹಾಗೂ ಸಾರ್ವಜನಿಕ ಪ್ರಕಟಣೆ ವ್ಯವಸ್ಥೆ ಇದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ಕಾರ್ಡ್ ಮಾದರಿಯ ಉಚಿತ ವಿದ್ಯಾರ್ಥಿ ಪಾಸುಗಳನ್ನು ವಿತರಿಸಲಾಗುತ್ತಿದೆ. ಇದರ ಉದ್ಘಾಟನಾ ಕಾರ್ಯಕ್ರಮ ಗುರುವಾರ ಬೆಳಿಗ್ಗೆ 10.45ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ. ಯೋಜನೆಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.
ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಬಿಎಂಟಿಸಿ ಅಧ್ಯಕ್ಷ ಎನ್.ಎ.ಹ್ಯಾರಿಸ್, ವ್ಯವಸ್ಥಾಪಕ ನಿರ್ದೇಶಕ ಎನ್.ವಿ.ಪ್ರಸಾದ್, ನಿರ್ದೇಶಕ ಅನುಪಮ್ ಅಗರವಾಲ್ ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.