ADVERTISEMENT

ಬೆಂಗಳೂರು: ನ್ಯಾಯಾಧೀಶರಿಗೆ ಸ್ಥಳ ನಿಯೋಜನೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2023, 20:22 IST
Last Updated 13 ಜನವರಿ 2023, 20:22 IST
ನೂತನ ಜಿಲ್ಲಾ ನ್ಯಾಯಾಧೀಶರನ್ನು ಬೆಂಗಳೂರು ವಕೀಲರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಡಿ. ಸರಿತಾ (ಎಡದಿಂದ ಕುಳಿತವರು), ಸುಮಂಗಲಾ ಚಾಕಲಬ್ಬಿ, ಎ. ಸಿರಾಜುದ್ದೀನ್, ಬಿ.ಎಲ್.ಮಾಯಣ್ಣ, ಆನಂದ್, ಎನ್.ಆರ್.ಮಧು, ಗಂಗಪ್ಪ ಈರಪ್ಪ ಪಾಟೀಲ್‌. ಸಿಟಿ ಸಿವಿಲ್‌ ಕೋರ್ಟ್‌ ಪ್ರಧಾನ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಟಿ. ವೆಂಕಟೇಶ್ ನಾಯಕ್, ಲಘು ವ್ಯವಹಾರಗಳ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ತ್ಯಾಗರಾಜ್ ಎನ್. ಇನವಳ್ಳಿ, ವಕೀಲರ ಸಂಘದ ಅಧ್ಯಕ್ಷ ವಿವೇಕ ಸುಬ್ಬಾರೆಡ್ಡಿ, ಪ್ರ.ಕಾ.ಟಿ.ಜಿ.ರವಿ, ನಗರ ವಿಭಾಗದ ಉಪಾಧ್ಯಕ್ಷ ಜಿ.ನಾರಾಯಣ ಸ್ವಾಮಿ ಮತ್ತು ಜಂಟಿ ಕಾರ್ಯದರ್ಶಿ ಕೆ.ಎನ್‌.ಅಂಬರೀಶ್ ಇದ್ದಾರೆ.

ಬೆಂಗಳೂರು: ಹೊಸದಾಗಿ ನೇಮಕಗೊಂಡಿರುವ ಜಿಲ್ಲಾ ನ್ಯಾಯಾಧೀಶರಿಗೆ ಹುದ್ದೆ ತೋರಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಬಿ.ಮುರಳೀಧರ ಪೈ ಅಧಿಸೂಚನೆ ಹೊರಡಿಸಿದ್ದು, ಎಲ್ಲಾ ನಿಯೋಜಿತ ನ್ಯಾಯಾಧೀಶರು ಇದೇ 16ರ ಬೆಳಿಗ್ಗೆ ಅಧಿಕಾರ ವಹಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಗಂಗಪ್ಪ ಈರಪ್ಪ ಪಾಟೀಲ್ ಅವರಿಗೆ ಬೆಂಗಳೂರು ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಸುಮಂಗಲ ಚಾಕಲಬ್ಬಿ ಅವರಿಗೆ 41ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಎನ್.ಆರ್. ಮಧು ಅವರಿಗೆ 30ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮತ್ತು ಎ. ಸಿರಾಜುದ್ದೀನ್ ಅವರಿಗೆ 20ನೇ ಹೆಚ್ಚುವರಿ ಮತ್ತು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ನಿಯೋಜಿಸಲಾಗಿದೆ.

ಆನಂದ ಅವರಿಗೆ ಹಾಸನದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಡಿ.ಸರಿತಾ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮತ್ತು ಬಿ.ಎಲ್. ಮಾಯಣ್ಣ ಅವರಿಗೆ ಉತ್ತರ ಕನ್ನಡ ಜಿಲ್ಲೆಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಹುದ್ದೆಗೆ ನಿಯೊಜಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.