ADVERTISEMENT

ಪ್ಲಾಸ್ಟಿಕ್ ನಿಷೇಧ ಗೊಂದಲ ಶೀಘ್ರ ನಿವಾರಣೆ: ಬಿಬಿಎಂಪಿ

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 19:43 IST
Last Updated 4 ಜುಲೈ 2022, 19:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಕ್ಕೆ ಸಂಬಂಧಿಸಿದಂತೆ ತಪಾಸಣೆಗೆ ಹೋಗುವವರು ಹಾಗೂ ವ್ಯಾಪಾರಿಗಳ ನಡುವೆ ಕೆಲವು ಗೊಂದಲಗಳಿವೆ. ಅವುಗಳನ್ನು ಶೀಘ್ರ ಬಗೆಹರಿಸಲಾಗುತ್ತದೆ ಎಂದು ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತ ಹರೀಶ್‌ ಕುಮಾರ್‌ ಹೇಳಿದರು.

‘ಪ್ಲಾಸ್ಟಿಕ್ ಬಳಕೆ ಸಂಬಂಧ ನಮ್ಮ ತಂಡ ತಪಾಸಣೆಗೆ ಹೋದಾಗ ವ್ಯಾಪಾರಿಗಳು ಈ ಪ್ಲಾಸ್ಟಿಕ್‌ ನಿಷೇಧವಾಗಿಲ್ಲ, ಅದಾಗಿಲ್ಲ ಎಂದು ಹೇಳುತ್ತಿದ್ದಾರೆ. ಕೆಲವು ಬಾರಿ ಅಧಿಕಾರಿಗಳಿಗೂ ಗೊಂದಲವಾಗುತ್ತಿದೆ. ಮೊದಲು ಮೈಕ್ರಾನ್‌ ಆಧಾರದಲ್ಲಿ ಪ್ಲಾಸ್ಟಿಕ್‌ ನಿಷೇಧವಿತ್ತು. ಈಗ ಏಕಬಳಕೆ ಪ್ಲಾಸ್ಟಿಕ್‌ ಎಂದು ಸೂಚಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಸ್ಪಷ್ಟನೆ ಹಾಗೂ ಮಾಹಿತಿಯನ್ನು ಜನರು ಹಾಗೂ ಅಧಿಕಾರಿಗಳಿಗೆ ನೀಡಬೇಕಾಗಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.

‘ವ್ಯಾಪಾರಸ್ಥರು ಹಾಗೂ ನಾಗರಿಕರಿಂದ ನಮಗೆ ದೂರು ಬಂದಿವೆ. ಪ್ಲಾಸ್ಟಿಕ್‌ ಬಳಕೆ ನಿಷೇಧ ಹಾಗೂ ತಪಾಸಣೆ ಸಂದರ್ಭದಲ್ಲಿ ಅಸಮಾಧಾನ ವ್ಯಕ್ತವಾಗಿದ್ದು ಕಿರುಕುಳ ನೀಡುತ್ತಿದ್ದಾರೆ ಎಂದಿದ್ದಾರೆ. ಹೀಗಾಗಿ ಈ ಬಗ್ಗೆ
ಸ್ಪಷ್ಟ ತಿಳಿವಳಿಕೆಯನ್ನು ತಪಾಸಣೆ ನಡೆಸುವ ನಮ್ಮ ಅಧಿಕಾರಿಗಳಿಗೂ ಹಾಗೂ ವ್ಯಾಪಾರಿಗಳಿಗೂ ಶೀಘ್ರವೇ ಮಾಹಿತಿ ನೀಡಲಾಗುತ್ತದೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.