ADVERTISEMENT

PHOTOS | ವೈಟ್‌ಫೀಲ್ಡ್‌–ಕೆ.ಆರ್.ಪುರ ಮೆಟ್ರೊ ರೈಲು ಮಾರ್ಗ ಚಾಲನೆ

ವೈಟ್‌ಫೀಲ್ಡ್‌–ಕೆ.ಆರ್.ಪುರ ನಡುವಿನ ಮೆಟ್ರೊ ರೈಲು ಮಾರ್ಗ ಶನಿವಾರ ಉದ್ಘಾಟನೆಗೊಂಡಿದೆ. ಆ ಮೂಲಕ ದೇಶದ ಎರಡನೇ ಅತಿದೊಡ್ಡ ಮೆಟ್ರೊ ರೈಲು ಮಾರ್ಗವಾಗಿ ‘ನಮ್ಮ ಮೆಟ್ರೊ’ ಹೊರ ಹೊಮ್ಮಿದೆ.

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 13:26 IST
Last Updated 25 ಮಾರ್ಚ್ 2023, 13:26 IST
ವೈಟ್‌ಫೀಲ್ಡ್‌–ಕೆ.ಆರ್.ಪುರ ನಡುವಿನ ಮೆಟ್ರೊ ರೈಲು ಮಾರ್ಗ ಶನಿವಾರ ಚಾಲನೆಗೊಂಡಿದೆ.
ವೈಟ್‌ಫೀಲ್ಡ್‌–ಕೆ.ಆರ್.ಪುರ ನಡುವಿನ ಮೆಟ್ರೊ ರೈಲು ಮಾರ್ಗ ಶನಿವಾರ ಚಾಲನೆಗೊಂಡಿದೆ.    
ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿಸಿದರು.
ಆ ಮೂಲಕ ದೇಶದ ಎರಡನೇ ಅತಿದೊಡ್ಡ ಮೆಟ್ರೊ ರೈಲು ಮಾರ್ಗವಾಗಿ ‘ನಮ್ಮ ಮೆಟ್ರೊ’ ಹೊರ ಹೊಮ್ಮಿದೆ.
ವೈಟ್‌ಫೀಲ್ಡ್‌–ಕೆ.ಆರ್.ಪುರ ಮೆಟ್ರೊ ಭಾನುವಾರದಿಂದಲೇ ಸಾರ್ವಜನಿಕ ಸಂಚಾರಕ್ಕೆ ಲಭ್ಯವಾಗಲಿದೆ.
‘ನಮ್ಮ ಮೆಟ್ರೊ’ ಎರಡನೇ ಹಂತದ ವಿಸ್ತರಿತ ಮೂರನೇ ಮಾರ್ಗ ಇದಾಗಿದೆ.
ಈ ಮಾರ್ಗವನ್ನು ಐಟಿ ಕಾರಿಡಾರ್ ಮಾರ್ಗ ಎಂದು ಕರೆಯಲಾಗುತ್ತಿದೆ.
ಹೊಸ ಮಾರ್ಗದಲ್ಲಿ 12 ನಿಲ್ದಾಣಗಳಿದ್ದು, ಕೆಲವು ನಿಲ್ದಾಣಗಳಿಗೆ ಐಟಿ ಕಂಪನಿಗಳ ಹೆಸರುಗಳನ್ನು ಜೋಡಿಸಿ ಹೆಸರಿಡಲಾಗಿದೆ.
ಕೃಷ್ಣರಾಜಪುರ, ಸಿಂಗಯ್ಯನಪಾಳ್ಯ, ಗರುಡಾಚಾರ್‌ ಪಾಳ್ಯ, ಹೂಡಿ, ಸೀತಾರಾಮಪಾಳ್ಯ, ಕುಂದಲಹಳ್ಳಿ, ನಲ್ಲೂರು ಹಳ್ಳಿ, ಶ್ರೀಸತ್ಯ ಸಾಯಿ ಆಸ್ಪತ್ರೆ, ಪಟ್ಟಂದೂರು ಅಗ್ರಹಾರ, ಕಾಡುಗೋಡಿ ಟ್ರೀ ಪಾರ್ಕ್, ಹೋಪ್‌ಫಾರ್ಮ್ ಚನ್ನಸಂದ್ರ, ವೈಟ್‍ಫೀಲ್ಡ್ (ಕಾಡುಗೋಡಿ) ಎಂಬ ಹೆಸರುಗಳನ್ನು ಇಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.