ADVERTISEMENT

ಲೋಕಾಯುಕ್ತ SIT ಕೆಲಸಕ್ಕೆ ಅಡ್ಡಿಪಡಿಸಿದರೆ ಪೊಲೀಸರಿಂದ ಕ್ರಮ: ಜಿ. ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2024, 8:16 IST
Last Updated 30 ಸೆಪ್ಟೆಂಬರ್ 2024, 8:16 IST
ಜಿ. ಪರಮೇಶ್ವರ
ಜಿ. ಪರಮೇಶ್ವರ   

ಬೆಂಗಳೂರು: ‘ಲೋಕಾಯುಕ್ತ ವಿಶೇಷ ತನಿಖಾ ದಳದ (ಎಸ್ಐಟಿ) ಕೆಲಸಕ್ಕೆ ಅಡ್ಡಿಪಡಿಸಿದರೆ ಅವರದ್ದೇ ಆದ ಕೆಲವು ಕ್ರಮಗಳನ್ನು ಪೊಲೀಸ್‌ನವರು ತೆಗೆದುಕೊಳುತ್ತಾರೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಎಚ್.ಡಿ. ಕುಮಾರಸ್ವಾಮಿ ಮತ್ತು ಎಡಿಜಿಪಿ ಚಂದ್ರಶೇಖರ್ ಜಟಾಪಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಚಂದ್ರಶೇಖರ್ ನೇತೃತ್ವದ ಎಸ್ಐಟಿಯನ್ನು ಕಾನೂನು ಪ್ರಕಾರವೇ ರಚಿಸಲಾಗಿದೆ. ಅವರು ಅವರ ಕೆಲಸ ಮಾಡ್ತಾರೆ. ಕೆಲಸಕ್ಕೆ ಅಡ್ಡಿಪಡಿಸಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ’ ಎಂದು ಎಚ್ಚರಿಕೆ ನೀಡಿದರು.

‘ಚಂದ್ರಶೇಖರ್ ಅವರು ತಮ್ಮ ಪತ್ರದಲ್ಲಿ ಬರ್ನಾರ್ಡ್ ಷಾ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ. ಅವರು ಅದನ್ನು ಕುಮಾರಸ್ವಾಮಿಯವರನ್ನು ಉದ್ದೇಶಿಸಿ ಹೇಳಿಲ್ಲ. ನನಗೇ ಹೇಳಿರುವುದು ಎಂದು ಕುಮಾರಸ್ವಾಮಿ ಯಾಕೆ ಭಾವಿಸಬೇಕು?’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.