ADVERTISEMENT

ಹಲ್ಲೆ ಮಾಡಿ ಪರಾರಿ: 10 ವರ್ಷಗಳ ಬಳಿಕ ಸಿಕ್ಕಿಬಿದ್ದ ಆರೋಪಿ

​ಪ್ರಜಾವಾಣಿ ವಾರ್ತೆ
Published 31 ಮೇ 2024, 16:16 IST
Last Updated 31 ಮೇ 2024, 16:16 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಹನುಮಂತನಗರ ಠಾಣೆ ವ್ಯಾಪ್ತಿಯಲ್ಲಿ 2014ರಲ್ಲಿ ನಡೆದಿದ್ದ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಪರಾರಿಯಾಗಿದ್ದ ಆರೋಪಿ ಬಿ.ಆರ್. ನಟರಾಜ್ (51) ಎಂಬುವವರನ್ನು 10 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ.

‘ಬನಶಂಕರಿ ಭವಾನಿನಗರದ ಬಿ.ಆರ್.ನಟರಾಜ್‌, ತಲೆಮರೆಸಿಕೊಂಡು ಓಡಾಡುತ್ತಿದ್ದ. ಇತ್ತೀಚೆಗೆ ಈತನ ಬಗ್ಗೆ ಮಾಹಿತಿ ಕಲೆಹಾಕಿ ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

ADVERTISEMENT

‘ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದ ನಟರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಜೈಲಿನಿಂದ ಜಾಮೀನು ಮೇಲೆ ಬಿಡುಗಡೆಗೊಂಡಿದ್ದ ಈತ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ’ ಎಂದು ತಿಳಿಸಿದರು.

‘ಆರೋಪಿ ಬಂಧನಕ್ಕೆ ನ್ಯಾಯಾಲಯದಿಂದ ವಾರಂಟ್ ಸಹ ಜಾರಿಯಾಗಿತ್ತು. ಚನ್ನಮ್ಮನಕೆರೆ ಅಚ್ಚುಕಟ್ಟು ಸಮೀಪದ ಗೌಡರಪಾಳ್ಯದಲ್ಲಿ ಇತ್ತೀಚೆಗೆ ಆರೋಪಿ ಕಾಣಿಸಿಕೊಂಡಿದ್ದ. ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ಹೋಗಿ ಬಂಧಿಸಲಾಗಿದೆ. ಸದ್ಯ ಈತ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.