ADVERTISEMENT

ಬೆಂಗಳೂರಿನಲ್ಲಿ ಪಟಾಕಿ ಸಿಡಿಸಲು ಎರಡು ಗಂಟೆ ಅವಕಾಶ: ಪೊಲೀಸ್ ಕಮಿಷನರ್ ದಯಾನಂದ್

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2023, 0:30 IST
Last Updated 11 ನವೆಂಬರ್ 2023, 0:30 IST
ಬಿ. ದಯಾನಂದ್
ಬಿ. ದಯಾನಂದ್   

ಬೆಂಗಳೂರು: ‘ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನದಂತೆ ನಗರದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ’ ಎಂದು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿ ಮಾರಾಟ ಹಾಗೂ ಬಳಕೆಗೆ ಮಾತ್ರ ಅವಕಾಶವಿದೆ. ಈ ಬಗ್ಗೆ ನಿಗಾ ವಹಿಸಲು ಎಸಿಪಿ ನೇತೃತ್ವದಲ್ಲಿ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದರು.

‘ನಗರದಲ್ಲಿರುವ 62 ಮೈದಾನಗಳಲ್ಲಿ ಪಟಾಕಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಸಿರು ಪಟಾಕಿ ಮಾರಲು ಅನುಮತಿ ಕೋರಿ 912 ವ್ಯಾಪಾರಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ, 263 ವ್ಯಾಪಾರಿಗಳಿಗೆ ಈಗಾಗಲೇ ಪರವಾನಗಿ ನೀಡಲಾಗಿದೆ’ ಎಂದು ಅವರು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.