ಬೆಂಗಳೂರು: ‘ಕೋವಿಡ್’ನಿಂದ ಚೇತರಿಸಿಕೊಂಡಿರುವ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಮಂಗಳವಾರದಿಂದ ಪೂರ್ಣಪ್ರಮಾಣದಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
‘ಜನವರಿ ಮೊದಲ ವಾರದಲ್ಲಿ ಆಯಾಸ ಹಾಗೂ ಸುಸ್ತು ಕಾಣಿಸಿಕೊಂಡಿತ್ತು. ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿದ್ದೆ. ಜ. 11ರಂದು ಪಾಸಿಟಿವ್ ಬಂದಿತ್ತು. ಅಂದಿನಿಂದ ಮನೆಯಲ್ಲೇ ಪ್ರತ್ಯೇಕವಾಗಿ ವಾಸವಿದ್ದೆ. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಮಂಗಳವಾರದಿಂದ ಕಚೇರಿಯಿಂದ ಕೆಲಸ ಮಾಡಲಿದ್ದೇನೆ’ ಎಂದು ಕಮಿಷನರ್ ಕಮಲ್ ಪಂತ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
738 ಪೊಲೀಸರಿಗೆ ಸೋಂಕು: ‘ಮೂರನೇ ಅಲೆ ವೇಳೆ ನಗರದ 738 ಪೊಲೀಸರಿಗೆ ಕೊರೊನಾ ಸೋಂಕು ತಗುಲಿದ್ದು, ಬಹುತೇಕರು ಮನೆಯಲ್ಲೇ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
‘ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಪೊಲೀಸರು ಹಾಗೂ ಅವರ ಕುಟುಂಬದವರಿಗೆ ಕಮಿಷನರ್ ಅವರು ಸಲಹೆ ನೀಡಿದ್ದಾರೆ. ಠಾಣೆಯನ್ನು ನಿತ್ಯವೂ ಸ್ಯಾನಿಟೈಸ್ ಮಾಡುವಂತೆ ಸೂಚಿಸಿದ್ದಾರೆ. ಕೋವಿಡ್ ಲಕ್ಷಣಗಳು ಕಂಡುಬಂದರೆ, ಪರೀಕ್ಷೆ ಮಾಡಿಸಿ ಚಿಕಿತ್ಸೆ ಪಡೆಯುವಂತೆಯೂ ಹೇಳಿದ್ದಾರೆ’ ಎಂದೂ ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.