ADVERTISEMENT

ಬೆಂಗಳೂರು | ಬಾಡಿಗೆಗೆ ಕಾರು ಪಡೆದು ವಂಚನೆ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 23:30 IST
Last Updated 21 ಜೂನ್ 2024, 23:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಕಾರು ಬಾಡಿಗೆಗೆ ಪಡೆದು ನಂತರ ಅದಕ್ಕೆ ಅಳವಡಿಸಿದ್ದ ಜಿಪಿಎಸ್ ತೆಗೆದು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಲಗ್ಗೆರೆ ನಿವಾಸಿ ಶ್ರೀನಿವಾಸ್ (32) ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ ₹90 ಲಕ್ಷ ಮೌಲ್ಯದ 9 ಕಾರು ವಶಪಡಿಸಿಕೊಳ್ಳಲಾಗಿದೆ.

ADVERTISEMENT

‘ಆರೋಪಿಯು ಮಾಲೀಕರಿಂದ ಕಾರುಗಳನ್ನು ಬಾಡಿಗೆಗೆ ಪಡೆದುಕೊಳ್ಳುತ್ತಿದ್ದ. ನಂತರ, ಕಾರಿನಲ್ಲಿರುತ್ತಿದ್ದ ಜಿಪಿಎಸ್ ಅನ್ನು ತೆಗೆದು ಹಾಕಿ ನಕಲಿ ದಾಖಲೆಗಳನ್ನು ಸಷ್ಟಿಸಿ, ಕಾರು ಸಹಿತ ಪರಾರಿ ಆಗುತ್ತಿದ್ದ. ಬಳಿಕ ಮಾಲೀಕರಿಗೆ ಮತ್ತು ಕಾರು ಖರೀದಿದಾರರಿಗೆ ಮೋಸ ಮಾಡುತ್ತಿದ್ದ’ ಎಂದು ಪೊಲೀಸರು ಹೇಳಿದರು.

‘ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್‌ 25ರಂದು ಕಾರು ಬಾಡಿಗೆಗೆ ಕೊಡುವವರಿಂದ ಕಾರನ್ನು ಆರೋಪಿ ಶ್ರೀನಿವಾಸ್ ತಿಂಗಳ ಮಟ್ಟಿಗೆ ಬಾಡಿಗೆಗೆ ಪಡೆದುಕೊಂಡಿದ್ದ. ನಂತರ, ಅವರ ಕಾರಿಗೆ ಅಳವಡಿಸಿದ್ದ ಜಿಪಿಎಸ್ ಅನ್ನು ತೆಗೆದುಹಾಕಿ ಬಾಡಿಗೆಗೆ ಕಾರು ಕೊಟ್ಟವರ ಸಂಪರ್ಕಕ್ಕೆ ಸಿಗದೆ ತಲೆಮರೆಸಿಕೊಂಡಿದ್ದ. ಕಾರು ಮಾಲೀಕರು ನೀಡಿದ ದೂರು ಆಧರಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಜೂನ್ 9ರಂದು ಶಿವಮೊಗ್ಗದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕೃತ್ಯ ಎಸಗಿದ್ದನ್ನು ಬಾಯ್ಬಿಟ್ಟಿದ್ದಾನೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಆರು ದಿನ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.