ಬೆಂಗಳೂರು: ನಗರದ ಎರಡು ಹುಕ್ಕಾ ಬಾರ್‌ಗಳ ಮೇಲೆ ಪೊಲೀಸರು ದಾಳಿ ಮಾಡಿದ್ದು, ಗ್ರಾಹಕರು ಸೇರಿ ಹಲವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಹುಕ್ಕಾ ಸಂಗ್ರಹ, ಮಾರಾಟ ಹಾಗೂ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಷ್ಟಾದರೂ ಕೆಲವರು ಅಕ್ರಮವಾಗಿ ಹುಕ್ಕಾ ಬಾರ್ ನಡೆಸುತ್ತಿದ್ದರು. ಸಿಸಿಬಿ ಹಾಗೂ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಪ್ರತ್ಯೇಕವಾಗಿ ದಾಳಿ ಮಾಡಿದ್ದರು’ ಎಂದು ಕಮಿಷನರ್ ಬಿ. ದಯಾನಂದ್ ಹೇಳಿದರು.
‘ಅಶೋಕನಗರ ಠಾಣೆ ವ್ಯಾಪ್ತಿಯ ಹುಕ್ಕಾ ಬಾರ್‌ವೊಂದರ ಮೇಲೆ ದಾಳಿ ಮಾಡಿ ಮಾಲೀಕ, 6 ಕೆಲಸಗಾರರು ಹಾಗೂ 12 ಗ್ರಾಹಕರನ್ನು ವಶಕ್ಕೆ ಪಡೆಯಲಾಗಿದೆ. ₹ 1.20 ಲಕ್ಷ ಮೌಲ್ಯದ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ’ ಎಂದರು.
‘ಕಬ್ಬನ್ ಪಾರ್ಕ್ ಠಾಣೆ ವ್ಯಾಪ್ತಿಯಲ್ಲಿರುವ ಇನ್ನೊಂದು ಹುಕ್ಕಾ ಬಾರ್ ಮೇಲೂ ದಾಳಿ ಮಾಡಲಾಗಿದ್ದು, ಮಾಲೀಕ ಹಾಗೂ ಗ್ರಾಹಕನನ್ನು ವಶಕ್ಕೆ ಪಡೆಯಲಾಗಿದೆ. 3 ಹುಕ್ಕಾ ಪಾಟ್ ಹಾಗೂ 3 ಪೈಪ್ ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.