ADVERTISEMENT

ರೋಹಿತ್ ಚಕ್ರತೀರ್ಥಗೆ ಪೊಲೀಸ್ ಭದ್ರತೆ

​ಪ್ರಜಾವಾಣಿ ವಾರ್ತೆ
Published 28 ಮೇ 2022, 20:25 IST
Last Updated 28 ಮೇ 2022, 20:25 IST
ರೋಹಿತ್ ಚಕ್ರತೀರ್ಥ
ರೋಹಿತ್ ಚಕ್ರತೀರ್ಥ   

ಬೆಂಗಳೂರು: ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ರಾಜ್ಯದಲ್ಲಿ ಪರ–ವಿರೋಧ ಚರ್ಚೆ ನಡೆಯುತ್ತಿದ್ದು, ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರಿಗೆ ಹೆಚ್ಚಿನ ಭದ್ರತೆ ನೀಡುವಂತೆ ಗುಪ್ತಚರ ಇಲಾಖೆ, ಪೊಲೀಸರಿಗೆ ಸಲಹೆ ನೀಡಿದೆ.

‘ರೋಹಿತ್ ಅವರು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಅಲ್ಲೆಲ್ಲ ಪ್ರತಿಭಟನೆಗಳು ಹಾಗೂ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಇದೆ. ಹೀಗಾಗಿ, ಕಾರ್ಯಕ್ರಮ ಸ್ಥಳದಲ್ಲಿ ಭದ್ರತೆ ನೀಡಲು ಕ್ರಮ ಕೈಗೊಳ್ಳಿ’ ಎಂದು ಗುಪ್ತಚರ ಅಧಿಕಾರಿಗಳು ಹೇಳಿರುವುದಾಗಿ ಗೊತ್ತಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸ್ ಅಧಿಕಾರಿಯೊಬ್ಬರು, ‘ಕಾರ್ಯಕ್ರಮ ನಡೆಯುವ ವ್ಯಾಪ್ತಿಯಲ್ಲಿರುವ ಠಾಣೆ ಪೊಲೀಸರೇ ರೋಹಿತ್ ಅವರಿಗೆ ಭದ್ರತೆ ನೀಡಲಿದ್ದಾರೆ’ ಎಂದರು.

ADVERTISEMENT

‘ರೋಹಿತ್ ಅವರು ಪಾಲ್ಗೊಳ್ಳುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದು, ಅಲ್ಲೆಲ್ಲ ಭದ್ರತೆಗೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯವಿರುವ ಕಡೆ ನುರಿತ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗುತ್ತಿದೆ. ಇದು ಮುಂಜಾಗ್ರತಾ ಕ್ರಮವಷ್ಟೇ’ ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.