ಬೆಂಗಳೂರು: ಮಹದೇವಪುರ ಹಾಗೂ ಕೊಡಿಗೇಹಳ್ಳಿ ಠಾಣೆ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿ ₹12 ಲಕ್ಷ ಮೌಲ್ಯದ 18 ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ.
ಕಿರಣ್ (21) ಎಂಬಾತನನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ₹8 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ.
ಎಚ್.ಪಿ. ಕಂಪನಿಯ ಉದ್ಯೋಗಿ ಸಂಸ್ಥೆಯ ಕಚೇರಿ ಎದುರು ದ್ವಿಚಕ್ರ ವಾಹನ ನಿಲ್ಲಿಸಿ ಹೋಗಿದ್ದರು. ವಾಪಸ್ ಬರುವಷ್ಟರಲ್ಲಿ ದ್ವಿಚಕ್ರ ವಾಹನ ಕಳವು ನಡೆದಿತ್ತು. ಅವರು ನೀಡಿದ ದೂರು ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ಧಾರೆ.
ಕದ್ದ ಬೈಕ್‌ಗಳನ್ನು ಆರೋಪಿ ರೈಲು ನಿಲ್ದಾಣದ ಡೀಸೆಲ್ ಶೆಡ್ ಪಕ್ಕದ ಖಾಲಿ ಜಾಗದಲ್ಲಿ ನಿಲುಗಡೆ ಮಾಡುತ್ತಿದ್ದ. ಅಲ್ಲಿಂದ ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ರಸ್ತೆಬದಿ ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಇಬ್ಬರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿ ₹ 3.92 ಲಕ್ಷ ಮೌಲ್ಯದ ಏಳು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ಧಾರೆ.
ಆರ್.ಟಿ ನಗರದ ಸಲ್ಮಾನ್ ಪಾಷಾ(22) ಮತ್ತು ಡಿ.ಜೆ.ಹಳ್ಳಿಯ ಅಸ್ಲಾಂ ಪಾಷಾ(23) ಬಂಧಿತರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.