ಬೆಂಗಳೂರು: ಹೊಸಹಳ್ಳಿ ಬಡಾವಣೆಯ ಅರಿಹಂತ್ ಚಿನ್ನಾಭರಣ ಅಂಗಡಿ ಮಾಲೀಕ ಸುರೇಂದ್ರ ಕುಮಾರ್ ಜೈನ್ ಮನೆಯಲ್ಲಿ ₹15 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಪ್ರಕರಣದ ಆರೋಪಿಗಳ ಪತ್ತೆಗಾಗಿ ಪೊಲೀಸರ ತಂಡ ಹೊರ ರಾಜ್ಯಕ್ಕೆ ತೆರಳಿದೆ.
ಮನೆಯ ಭದ್ರತಾ ಸಿಬ್ಬಂದಿ ನಮ್ರಾಜ್ ಮತ್ತು ಸುಷ್ಮಿತಾ ದಂಪತಿ ಬಂಧನ ಭೀತಿಯಿಂದ ಮೊಬೈಲ್ ಫೋನ್‌ಗಳನ್ನು ಸ್ವಿಚ್ಡ್ ಆಫ್ ಮಾಡಿ, ತಲೆ ಮರೆಸಿಕೊಂಡಿದ್ದಾರೆ. ಪೊಲೀಸ್ ತಂಡಗಳು ಹೊರ ರಾಜ್ಯಕ್ಕೆ ತೆರೆಳಿ ಶೋಧ ಕಾರ್ಯ ಆರಂಭಿಸಿವೆ.
ಆರೋಪಿಗಳು ಹೊರ ರಾಜ್ಯಕ್ಕೆ ಹೋಗಿರಬಹುದು ಅಥವಾ ನೇಪಾಳಕ್ಕೆ ಪರಾರಿಯಾಗಿರುವ ಸಾಧ್ಯತೆಯೂ ಇದೆ. ಆರೋಪಿಗಳ ಮೊಬೈಲ್ ಕರೆಗಳ ವಿವರ, ಯಾರೊಂದಿಗೆ ಕೊನೆಯ ಬಾರಿ ಮಾತನಾಡಿದ್ದರು ಎಂಬುದು ಹಾಗೂ ಅಕ್ಕಪಕ್ಕದ ನಿವಾಸಿಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಲೋಕೇಷನ್ ಪತ್ತೆ ಮಾಡುವ ಕಾರ್ಯ ಸಹ ನಡೆಯುತ್ತಿದೆ. ಆದರೆ, ಈವರೆಗೆ ಪೊಲೀಸ್ ತಂಡ ನೇಪಾಳಕ್ಕೆ ತೆರಳಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಸುರೇಂದ್ರ ಕುಮಾರ್ ಚಿನ್ನಾಭರಣ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಪೈಕಿ ಧ್ಯಾನ್ ಕರಣ್ ಮತ್ತು ರಾಜೇಶ್ ಎಂಬುವರು ವಿಜಯ ನಗರ ಠಾಣೆಯಲ್ಲಿ ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿದ್ದಾರೆ. ಅವರು ಸಹ ಕೃತ್ಯದಲ್ಲಿ ಭಾಗಿಯಾಗಿರುವ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.