ಬೆಂಗಳೂರು: ಮಹಿಳೆಯರ ಮೊಬೈಲ್‌ಗೆ ಅಶ್ಲೀಲ ವಿಡಿಯೊ ಹಾಗೂ ಫೋಟೊ ಕಳುಹಿಸುತ್ತಿದ್ದ ಆರೋಪದಡಿ ಹರೀಶ್ ಎಂಬಾತನನ್ನು ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
‘ಅರಕಲಗೂಡಿನ ಕಂಚೇನಹಳ್ಳಿಯ ಹರೀಶ್, ನಗರದ ಮಹಿಳೆಯೊಬ್ಬರಿಗೆ ಮೂರು ತಿಂಗಳಿನಿಂದ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಮಹಿಳೆಯ ಪತಿ ದೂರು ನೀಡಿದ್ದರು. ಅದರನ್ವಯ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಹಾಗೂ ಇತರೆ ಸಾಮಾಜಿಕ ಮಾಧ್ಯಮಗಳಲ್ಲಿ ಆರೋಪಿ ಖಾತೆ ತೆರೆದಿದ್ದ. ಅವುಗಳ ಮೂಲಕ ಮಹಿಳೆಯರ ಖಾತೆಗಳಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದ. ಅದನ್ನು ಸ್ವೀಕರಿಸುತ್ತಿದ್ದ ಮಹಿಳೆಯರ ಜೊತೆ ಚಾಟಿಂಗ್ ಮಾಡಲಾರಂಭಿಸುತ್ತಿದ್ದ. ಮೊಬೈಲ್ ನಂಬರ್ ಪಡೆದು, ವಾಟ್ಸ್‌ಆ್ಯಪ್‌ಗೂ ಸಂದೇಶ ಕಳುಹಿಸುತ್ತಿದ್ದ’ ಎಂದೂ ತಿಳಿಸಿದರು.
‘ಆನ್‌ಲೈನ್ ಮೂಲಕ ಅಶ್ಲೀಲ ವಿಡಿಯೊ ಹಾಗೂ ಫೋಟೊಗಳನ್ನು ಡೌನ್‌ಲೋಡ್ ಮಾಡುತ್ತಿದ್ದ ಆರೋಪಿ, ಅವುಗಳನ್ನು ಮಹಿಳೆಯರ ಮೊಬೈಲ್‌ಗೆ ಕಳುಹಿಸುತ್ತಿದ್ದ. ಲೈಂಗಿಕವಾಗಿ ಪ್ರಚೋದಿಸಲು ಯತ್ನಿಸುತ್ತಿದ್ದನೆಂದು ಗೊತ್ತಾಗಿದೆ.’
‘ಆರೋಪಿ 10 ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಮಾಹಿತಿ ಇದೆ. ಅಂಥ ಮಹಿಳೆಯರಿಂದ ಹೇಳಿಕೆ ಪಡೆಯಲಾಗುತ್ತಿದೆ’ ಎಂದೂ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.