ADVERTISEMENT

ವಿದ್ಯುತ್ ಸಂಪರ್ಕ ಕಡಿತ; ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2024, 5:19 IST
Last Updated 3 ಅಕ್ಟೋಬರ್ 2024, 5:19 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಬುಧವಾರ ಭಾರಿ ಮಳೆ ಮತ್ತು ಸಿಡಿಲಿನ ಹೊಡೆತದಿಂದ ಹಾರೋಹಳ್ಳಿ ಹಾಗೂ ಟಿ.ಕೆ ಹಳ್ಳಿ ವ್ಯಾಪ್ತಿಯಲ್ಲಿನ ಕೆಪಿಟಿಸಿಎಲ್ ಟ್ರಾನ್ಸ್‌ಫಾರ್ಮರ್‌ಗಳಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಕುಡಿಯುವ ನೀರಿನ ಪೂರೈಕೆ ಸ್ಥಗಿತಗೊಂಡಿದೆ.

ಪ್ರಮುಖ ಪಂಪಿಂಗ್ ಸ್ಟೇಷನ್‌ಗಳಿಗೆ ವಿದ್ಯುತ್ ಸರಬರಾಜು ಮಾಡುವ ಲೈನ್‌ಗಳಿಗೆ ಸಿಡಿಲಿನ ಹೊಡೆತದಿಂದ ಹಾನಿಯಾಗಿದೆ.

ADVERTISEMENT

ವಿದ್ಯುತ್ ಸಂಪರ್ಕ ಇಲ್ಲದೆ ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಪಂಪಿಂಗ್ ಸ್ಟೇಷನ್‌ಗಳು ಸ್ಥಗಿತಗೊಂಡಿವೆ.

ವಿದ್ಯುತ್ ಸಂಪರ್ಕ ಮರುಸ್ಥಾಪಿಸಲು ಕೆಪಿಟಿಸಿಎಲ್ ಕ್ರಮ ಕೈಗೊಂಡಿದೆ ಎಂದು ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.