ADVERTISEMENT

ವಿದ್ಯುತ್ ಕಡಿತ ಬೇಡ: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2019, 18:00 IST
Last Updated 25 ಜನವರಿ 2019, 18:00 IST

ಬೆಂಗಳೂರು: ಪರೀಕ್ಷಾ ಸಮಯದಲ್ಲಿ ವಿದ್ಯುತ್ ಕಡಿತ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಈ ಅವಧಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿ ಅಡಚಣೆಯಾಗದಂತೆ ಎಚ್ಚರವಹಿಸಬೇಕು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಇಂಧನ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ, ವಿವಿಧ ಎಸ್ಕಾಂಗಳ ಮುಖ್ಯಸ್ಥರ ಜತೆ ಸಮಾಲೋಚನೆ ನಡೆಸಿದರು. ವಿದ್ಯುತ್ ಬೇಡಿಕೆ ಮತ್ತು ಪೂರೈಕೆ ಕುರಿತು ಅಧಿಕಾರಿಗಳಿಂದ ಅವರು ಮಾಹಿತಿ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT