ADVERTISEMENT

ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ: ಎಸ್ಐಟಿಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 16:34 IST
Last Updated 11 ಜುಲೈ 2024, 16:34 IST
<div class="paragraphs"><p>ಪ್ರಜ್ವಲ್ ರೇವಣ್ಣ</p></div>

ಪ್ರಜ್ವಲ್ ರೇವಣ್ಣ

   

ಬೆಂಗಳೂರು: ಮಹಿಳೆಯೊಬ್ಬರ ಬೆತ್ತಲೆ ವಿಡಿಯೊ ಮಾಡಿಕೊಂಡು ಅವರನ್ನು ಬ್ಲ್ಯಾಕ್‌ಮೇಲ್‌ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಈ ಸಂಬಂಧ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್-82) ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ವಿಚಾರಣೆ ನಡೆಸಿದರು.

ADVERTISEMENT

ಎಸ್ಐಟಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಾಲಯ ವಿಚಾರಣೆಯನ್ನು ಇದೇ 12 ಕ್ಕೆ ಮುಂದೂಡಿದೆ.

‘ಮಗುವಿನ ಶಾಲಾ ಶುಲ್ಕ ತುಂಬಲು ಸಹಾಯ ಮಾಡುವ ಭರವಸೆ ನೀಡಿ ಮಹಿಳೆಯ ಮೊಬೈಲ್ ನಂಬರ್ ಸಂಗ್ರಹಿಸಿ ನಂತರ ಆಕೆಯ ಬೆತ್ತಲೆ ವಿಡಿಯೊ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ’ ಎಂಬ ಆರೋಪವನ್ನು ಪ್ರಜ್ವಲ್ ಎದುರಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.