ADVERTISEMENT

ಕಾವೇರಿ ಆರತಿ ಕಾರ್ಯಕ್ರಮಕ್ಕೆ ಸಿದ್ಧತೆ: ಗಂಗಾ ಆರತಿ ವೀಕ್ಷಣೆಗೆ ರಾಜ್ಯದ ನಿಯೋಗ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 15:42 IST
Last Updated 19 ಸೆಪ್ಟೆಂಬರ್ 2024, 15:42 IST
<div class="paragraphs"><p>ಗಂಗಾ ಆರತಿ</p></div>

ಗಂಗಾ ಆರತಿ

   

ಪಿಟಿಐ ಚಿತ್ರ

ಬೆಂಗಳೂರು: ಗಂಗಾ ನದಿಗೆ ಮಾಡಲಾಗುವ ಗಂಗಾ ಆರತಿ ಮಾದರಿ ಕಾವೇರಿ ನದಿಗೆ 'ಕಾವೇರಿ ಆರತಿ’ ಮಾಡುವ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಅವಲೋಕಿಸಿ ಅಧ್ಯಯನ ನಡೆಸಲು ಸಚಿವರು, ಶಾಸಕರು ಮತ್ತು ಅಧಿಕಾರಿಗಳನ್ನೊಳಗೊಂಡ ನಿಯೋಗ ವಾರಾಣಸಿ ಮತ್ತು ಹರಿದ್ವಾರಕ್ಕೆ ಶುಕ್ರವಾರ ಮತ್ತು ಶನಿವಾರ ಭೇಟಿ ನೀಡಲಿದೆ.

ADVERTISEMENT

ಕಾವೇರಿ ಆರತಿ ಕಾರ್ಯಕ್ರಮದ ಅಧ್ಯಕ್ಷ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಲ ಸಂಪನ್ಮೂಲ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ನಿಯೋಗ ಅಧ್ಯಯನ ಪ್ರವಾಸ ಕೈಗೊಳ್ಳಲಿದೆ.

ನಿಯೋಗವು ಸೆ.20ರ ರಾತ್ರಿ ಹರಿದ್ವಾರದಲ್ಲಿ ಗಂಗಾ ನದಿಗೆ ಆರತಿ ಮಾಡುವುದನ್ನು ವೀಕ್ಷಣೆ ಮಾಡಲಿದೆ. ಸೆ.21ರಂದು ವಾರಾಣಸಿಗೆ ತೆರಳಿ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ಆರತಿ ವೀಕ್ಷಣೆ ಮಾಡಲಿದೆ. ಸೆ.22ರಂದು ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುವುದರ ಜೊತೆಗೆ ಘಾಟ್‌ನಲ್ಲಿ ಸಂಚರಿಸಿ, ಅಲ್ಲಿನ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯಕ್ಕೆ ವಾಪಸ್‌ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ರವಿಕುಮಾರ್ ಗಣಿಗ, ಕೆ.ಎಂ.ಉದಯ್, ದಿನೇಶ್ ಗೂಳಿಗೌಡ, ಎಚ್‌.ಸಿ. ಬಾಲಕೃಷ್ಣ, ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ್, ಕೆ.ಎಂ.ಶಿವಲಿಂಗೇಗೌಡ, ಕೃಷ್ಣಮೂರ್ತಿ, ವಿಧಾನ ಪರಿಷತ್ ಮಾಜಿ ಸದಸ್ಯ ಅಪ್ಪಾಜಿಗೌಡ, ಮಂಡ್ಯ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಮಾಜಿ ಶಾಸಕ ರಾಜು, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಜಲ ಸಂಪನ್ಮೂಲ ಸಚಿವರ ಸಲಹೆಗಾರ ಜಯಪ್ರಕಾಶ್ ಸೇರಿದಂತೆ ಹಲವರು ನಿಯೋಗದಲ್ಲಿ ಇರಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.