ಬೆಂಗಳೂರು: ರಾಷ್ಟ್ರೀಯ ಉಚ್ಛತಾ ಶಿಕ್ಷಣ ಅಭಿಯಾನದಡಿ ಕಾರ್ಯಾರಂಭ ಮಾಡಿರುವ ನಗರದ ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಸಂಜೆ ಉದ್ಘಾಟಿಸಿದರು.
ಬೆಂಗಳೂರಿನ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ ಸಭಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮ ಜರುಗಿತು. ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉನ್ನತ ಶಿಕ್ಷಕ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಕಾರ್ಯಕ್ರಮದಲ್ಲಿದ್ದರು.
ಸೊಸೈಟಿ ಆಫ್ ಜೀಸಸ್ ಆಡಳಿತ ಮಂಡಳಿ ನಿರ್ವಹಣೆಯಲ್ಲಿ ವಿಶ್ವವಿದ್ಯಾಲಯ ಆರಂಭವಾಗಿದ್ದು, ಸದ್ಯ ವಿವಿಧ ವಿಭಾಗಗಳಲ್ಲಿ 8500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಕ್ಯಾಂಪಸ್‌ನಲ್ಲಿ ಸದ್ಯ ವಿಶ್ವವಿದ್ಯಾಲಯವಿದೆ. ಮುಂದಿನ ಐದು ವರ್ಷಗಳಲ್ಲಿ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ದೊಡ್ಡ ಕ್ಯಾಂಪಸ್ ನಿರ್ಮಾಣ ಮಾಡುವ ಉದ್ದೇಶ ಆಡಳಿತ ಮಂಡಳಿಯದ್ದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.