ಬೆಂಗಳೂರು: ‘ಸಂಧಿವಾತ ಕಾಯಿಲೆ ಬಗ್ಗೆ ಮುಂಜಾಗ್ರತೆ ಅಗತ್ಯವಾಗಿದ್ದು, ಅದರ ಆಧುನಿಕ ಚಿಕಿತ್ಸೆಯ ಬಗ್ಗೆ ಅರಿತುಕೊಳ್ಳುವುದೂ ಮುಖ್ಯ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ತಿಳಿಸಿದರು.
ಭಾರತೀಯ ಸಂಧಿವಾತ ವೈದ್ಯರ ಸಂಘಟನೆಯ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ ‘ಐರಾಕಾನ್– 2024’ ಉದ್ಘಾಟಿಸಿ ಅವರು ಶುಕ್ರವಾರ ಮಾತನಾಡಿದರು.
ಸಂಧಿವಾತ ಕಾಯಿಲೆ ಬಗ್ಗೆ ಹೆಚ್ಚಿನ ಜ್ಞಾನ ಪಡೆದುಕೊಳ್ಳಲು ಇಂತಹ ಸಮ್ಮೇಳನಗಳು ಸಹಕಾರಿ ಎಂದರು.
ಸಮ್ಮೇಳನದಲ್ಲಿ ದೇಶದ ನಾನಾ ಭಾಗಗಳಿಂದ ನಾಲ್ಕು ಸಾವಿರಕ್ಕೂ ಹೆಚ್ಚು ವೈದ್ಯರು ಭಾಗವಹಿಸಿದ್ದರು. ಸಂಧಿವಾತದ ಚಿಕಿತ್ಸೆಗೆ ಹೊಸ ತಾಂತ್ರಿಕತೆ, ಜೈವಿಕ ಔಷಧಿ ಮತ್ತು ರೋಗಿ ಕೇಂದ್ರಿತ ಚಿಕಿತ್ಸಾ ವಿಧಾನಗಳ ಕುರಿತು ಚರ್ಚೆ ನಡೆಸಿದರು.
ಐರಾಕಾನ್ ಮುಖ್ಯಸ್ಥರಾದ ಡಾ. ಚಂದ್ರಶೇಖರ್ ಮತ್ತು ಡಾ. ನಾಗರಾಜ್ ಅವರು ಸಮಾವೇಶದ ಉದ್ದೇಶ, ವೈಶಿಷ್ಟ್ಯಗಳನ್ನು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.