ADVERTISEMENT

ಪದ್ಮಶ್ರೀ ವಿದ್ಯಾಲಯದಲ್ಲಿ ಆಧುನಿಕ ಕೌಶಲಕ್ಕೆ ಆದ್ಯತೆ: ಕುಲಪತಿ ಎಸ್‌.ಎಂ.ಜಯಕರ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2024, 16:17 IST
Last Updated 16 ಮಾರ್ಚ್ 2024, 16:17 IST
‘ಪದ್ಮಶ್ರೀ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ ಆ್ಯಂಡ್‌ ಸೈನ್ಸಸ್’ ಕ್ಯಾಂಪಸ್‌ನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ‘ನವೋತ್ಥಾನ’ ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ  ಎಸ್‌.ಎಂ. ಜಯಕರ, ಶಾಸಕ ಸಿ.ಎನ್. ಅಶ್ವತ್ಥನಾರಾಯಣ, ಸಂಸ್ಥೆಯ ಪ್ರಾಂಶುಪಾಲರಾದ ಅನುರಾಧಾ, ವ್ಯವಸ್ಥಾಪಕ ನಿರ್ದೇಶಕ ಟಿ.ಕೆ. ನಾರಾಯಣಪ್ಪ, ಅಧ್ಯಕ್ಷ ಸತೀಶ್ ಪಾಲ್ಗೊಂಡಿದ್ದರು.

ಬೆಂಗಳೂರು: ಪದ್ಮಶ್ರೀ ವಿದ್ಯಾಲಯವು  ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ 21ನೇ ಶತಮಾನಕ್ಕೆ ಅಗತ್ಯವಿರುವ ಕೌಶಲಗಳನ್ನು ಮೈಗೂಡಿಸಲು ಆದ್ಯತೆ ನೀಡುತ್ತಿರುವುದು ಅನುಕರಣೀಯ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ  ಎಸ್‌.ಎಂ.ಜಯಕರ ಶ್ಲಾಘಿಸಿದರು.

 ‘ಪದ್ಮಶ್ರೀ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ ಆ್ಯಂಡ್‌ ಸೈನ್ಸಸ್’ ನ್ಯಾಕ್ ಎ++ ಮಾನ್ಯತೆ ಪಡೆದು ಸ್ವಾಯತ್ತ ಶಿಕ್ಷಣ ಸಂಸ್ಥೆ ಸ್ಥಾನಮಾನಕ್ಕೆ ಪದಾರ್ಪಣೆ ಮಾಡಿದ ಪ್ರಯುಕ್ತ ಕೊಮ್ಮಘಟ್ಟದಲ್ಲಿರುವ ಕ್ಯಾಂಪಸ್‌ನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ‘ನವೋತ್ಥಾನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಾಸಕ ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ‘ಸಂಸ್ಥೆಯ ಬೋಧಕ ಸಿಬ್ಬಂದಿಯ ಪರಿಶ್ರಮ ಹಾಗೂ ಕಾಳಜಿಯಿಂದಾಗಿ ಈ ಸ್ಥಾನಮಾನ ಸಿಕ್ಕಿದೆ’ ಎಂದು ತಿಳಿಸಿದರು.

ADVERTISEMENT

ಸಂಸ್ಥೆಯ ಪ್ರಾಂಶುಪಾಲರಾದ ಅನುರಾಧಾ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಟಿ.ಕೆ. ನಾರಾಯಣಪ್ಪ, ಅಧ್ಯಕ್ಷ ಸತೀಶ್, ನಿರ್ದೇಶಕರಾದ ರಾಜೇಶ್ ಶೆಣೈ, ಶಿವಪ್ರಸಾದ್, ಶ್ಯಾಮ್, ರಾಜಣ್ಣ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.