ADVERTISEMENT

ದರಪಟ್ಟಿ ಹಾಕದ ಆಸ್ಪತ್ರೆಯ ಪರವಾನಗಿ ರದ್ದು: ಸಚಿವ ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2024, 15:42 IST
Last Updated 22 ಫೆಬ್ರುವರಿ 2024, 15:42 IST
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್   

ಬೆಂಗಳೂರು: ‘ದರ ಪಟ್ಟಿ ಪ್ರಕಟಿಸದ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದುಪಡಿಸಲು ಚಿಂತನೆ ನಡೆಸಲಾಗಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಖಾಸಗಿ ಆಸ್ಪತ್ರೆಗಳು ಅಧಿಕ ಹಣ ವಸೂಲಿ ಮಾಡುತ್ತಿವೆ ಎಂಬ ದೂರುಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಕೆಪಿಎಂಇ ಕಾಯ್ದೆಯಡಿ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿಯನ್ನು ಹಾಕಬೇಕು. ಯಾವ ಚಿಕಿತ್ಸೆಗೆ ಎಷ್ಟು ದರ ಎಂದು ನಮೂದಿಸಿ, ಆಸ್ಪತ್ರೆಯ ಮುಂಭಾಗದಲ್ಲಿಯೇ ಪ್ರಕಟಿಸಬೇಕು. ಇಲ್ಲವಾದಲ್ಲಿ ಆಸ್ಪತ್ರೆಗಳಿಗೆ ನೋಟಿಸ್ ನೀಡಿ, ಬೀಗ ಹಾಕುವ ಬಗ್ಗೆಯೂ ಚಿಂತನೆ ಮಾಡಲಾಗಿದೆ’ ಎಂದು ಹೇಳಿದರು.

‘ಆಸ್ಪತ್ರೆಗಳು ದರಪಟ್ಟಿಯಲ್ಲಿ ನಮೂದಿಸಿದಷ್ಟೇ ಹಣವನ್ನು ಪಡೆಯಬೇಕು. ಹೆಚ್ಚಿನ ಹಣ ಪಡೆದ, ದರಪಟ್ಟಿ ಪ್ರದರ್ಶಿಸದ ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ಕೈಗೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೂ ಸೂಚಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

ಕೆಲವು ಆಸ್ಪತ್ರೆಗಳು ಅಧಿಕ ಚಿಕಿತ್ಸಾ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರಿಗೆ ರೋಗಿಗಳು ದೂರು ನೀಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.