ಬೆಂಗಳೂರು: ದೇಶದ್ರೋಹ ಕಾನೂನಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ದಿಢೀರನೆ ತನ್ನ ನಿಲುವು ಬದಲಿಸಿರುವುದು ಅಚ್ಚರಿ ಮೂಡಿಸಿದೆ ಎಂದು ಕಾಂಗ್ರೆಸ್ ಮುಖಂಡ ಪ್ರೊ. ಬಿ.ಕೆ. ಚಂದ್ರಶೇಖರ್ ಹೇಳಿದ್ದಾರೆ.
ಭಾರತೀಯ ದಂಡ ಸಂಹಿತೆಯ 124ಎ ಸೆಕ್ಷನ್ (‘ದೇಶದ್ರೋಹ ಕಾನೂನು’) ಅನ್ನು ‘ಅರ್ಹ ವೇದಿಕೆ’ಯಿಂದ ಮರುಪರಿಶೀಲನೆಗೆ ಒಳಪಡಿ
ಸಲು ನಿರ್ಧರಿಸಲಾಗಿದೆ. ಹಾಗಾಗಿ, ಈ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪರಿಶೀಲನೆಗೆ ಒಳಪಡಿಸಲು ಸಮಯ ವ್ಯಯಿಸಬೇಡಿ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರವು ಈ ಮೊದಲು ಹೇಳಿತ್ತು. ಆದರೆ, ತನ್ನ ನಿಲುವು ಬದಲಿಸಿದ ಕೇಂದ್ರ ಸರ್ಕಾರ, ಈ ಕಾನೂನು ಅನ್ನು ಮರುಪರಿಶೀಲಿಸುವುದಾಗಿ ತಿಳಿಸಿದೆ ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ 124 ಎ ಸೆಕ್ಷನ್ ಅನ್ನು ರದ್ದುಪಡಿಸುವ ಸಾಧ್ಯತೆಯೂ ಇದೆ. ಹೀಗಾಗಿ, ಸರ್ಕಾರ ಈ ನಿರ್ಧಾರ ಕೈಗೊಂಡಿರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.