ಬೆಂಗಳೂರು:ವೇಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಇಂದಿರಾನಗರ ಹಾಗೂ ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯ ಸ್ಪಾಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಎಂಟು ಮಹಿಳೆಯರನ್ನು ರಕ್ಷಿಸಿದ್ದಾರೆ.
‘ಜೆ.ಪಿ.ನಗರ 5ನೇ ಹಂತದ ಎಸ್‌ಎನ್‌ಬಿಆರ್ ಕಾಂಪ್ಲೆಕ್ಸ್‌ನಲ್ಲಿರುವ ‘ರೂಹಿ ಥೈ’ ಹಾಗೂ ಇಂದಿರಾನಗರ 100 ಅಡಿ ರಸ್ತೆಯಲ್ಲಿರುವ ‘ಐರಾ’ ಸ್ಪಾ ಮೇಲೆ ದಾಳಿ ಮಾಡಲಾಗಿದೆ. ಮೂವರು ಕೆಲಸಗಾರರು ಹಾಗೂ ನಾಲ್ವರು ಗ್ರಾಹಕರನ್ನು ಬಂಧಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.
‘ಥಾಯ್ಲೆಂಡ್ ಹಾಗೂ ಇತರೆಡೆ ಮಹಿಳೆಯರಿಗೆ ಉದ್ಯೋಗದ ಆಮಿಷವೊಡ್ಡಿ ನಗರಕ್ಕೆ ಕರೆಸಿಕೊಳ್ಳಲಾಗಿತ್ತು. ಅವರನ್ನೇ ವೇಶ್ಯಾವಾಟಿಕೆಗೆ ತಳ್ಳಲಾಗಿತ್ತು. ಮಸಾಜ್ ಹೆಸರಿನಲ್ಲಿ ಗ್ರಾಹಕರನ್ನು ಆಹ್ವಾನಿಸಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು’ ಎಂದೂ ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.