ಬೆಂಗಳೂರು: ಮೂಲಸೌಕರ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
‘ವಿ.ವಿಯಲ್ಲಿರುವ ಶೌಚಾಲಯಗಳು ಬಳಕೆಗೆ ಯೋಗ್ಯವಾಗಿಲ್ಲ. ಆದ್ದರಿಂದ, ಬೆಂಗಳೂರು ನಗರ ವಿಶ್ವವಿದ್ಯಾಲಯದ ಆವರಣದಲ್ಲಿರುವ ಶೌಚಾಲಯಗಳನ್ನು ಬಳಸುತ್ತಿದ್ದೇವೆ. ಶಿಥಿಲಗೊಂಡಿರುವ ಕೊಠಡಿಗಳಲ್ಲಿಯೇ ನಿತ್ಯ ಪಾಠ–ಪ್ರವಚನಗಳನ್ನು ಕೇಳುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ದೂರಿದರು.
ಈ ಬಗ್ಗೆ ಪ್ರತಿಕ್ರಿಯೆಸಿರುವ ವಿ.ವಿ ಕುಲಪತಿ ಎಲ್. ಗೋಮತಿ ದೇವಿ ಅವರು ವಾರದೊಳಗೆ ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂಬು ಭರವಸೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.