ADVERTISEMENT

ಕಾರ್ಮಿಕ ಇಲಾಖೆ ನೀಡುತ್ತಿರುವ ವಿದ್ಯಾರ್ಥಿವೇತನ ಕಡಿತ: 28ರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2023, 15:57 IST
Last Updated 22 ನವೆಂಬರ್ 2023, 15:57 IST

ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ನೀಡುತ್ತಿರುವ ವಿದ್ಯಾರ್ಥಿವೇತನ ಕಡಿತಗೊಳಿಸಿರುವುದನ್ನು ಖಂಡಿಸಿ ಇದೇ 28 ಮತ್ತು 29ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಟನೆಗಳ ಸಮನ್ವಯ ಸಮಿತಿ ತಿಳಿಸಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಸದಸ್ಯ ಕೆ. ಮಹಾಂತೇಶ್, ‘ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಧನಸಹಾಯ ನೀಡುವ ಕಲಿಕಾ ಭಾಗ್ಯ ಯೋಜನೆಯನ್ನು ದುಬರ್ಲಗೊಳಿಸಲಾಗಿದೆ. ಶೇ 75ರಷ್ಟು ವಿದ್ಯಾರ್ಥಿವೇತನವನ್ನು ಕಡಿತಗೊಳಿಸಲಾಗಿದೆ. ಇದರಿಂದ, ಕಾರ್ಮಿಕರ ಮಕ್ಕಳು ಶಾಲಾ–ಕಾಲೇಜು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ’ ಎಂದು ದೂರಿದರು.

‘ಮಂಡಳಿಯಲ್ಲಿ ಹಣವಿಲ್ಲ ಎಂದು ಹೇಳುವ ಕಾರ್ಮಿಕ ಸಚಿವರು ₹70 ಸಾವಿರ ಮೌಲ್ಯದ ಹತ್ತು ಸಾವಿರ ಲ್ಯಾಪ್‌ಟಾಪ್‌ಗಳನ್ನು ಹೇಗೆ ಖರೀದಿಸಿದ್ದಾರೆ? ಇದರ ಬದಲು 2020–21ನೇ ಸಾಲಿನ ಬಾಕಿ ಉಳಿಸಿಕೊಂಡಿರುವ ವಿದ್ಯಾರ್ಥಿವೇತನ ಬಿಡುಗಡೆಗೊಳಿಸಬೇಕಿತ್ತು’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.