ಬೆಂಗಳೂರು: ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸಿದೆ.
ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ನಡೆಯಲಿವೆ. ಈ ಸಮಯದಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಮತ್ತು ಪರೀಕ್ಷಾ ಕೇಂದ್ರದಿಂದ ವಾಸಸ್ಥಳಕ್ಕೆ ಪ್ರಯಾಣಿಸಬಹುದು. ಹೆಚ್ಚುವರಿ ಬಸ್‌ಗಳ ಅವಶ್ಯಕತೆ ಕಂಡು ಬಂದರೆ ಅದಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.