ಬೆಂಗಳೂರು: ನಿಯಮ ಉಲ್ಲಂಘನೆ ಆರೋಪದಡಿ ನಗರದ ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಸೇರಿದಂತೆ 1051 ಸ್ಥಳಗಳ ಮೇಲೆ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
‘ಅಪ್ರಾಪ್ತರಿಗೆ ಮದ್ಯ ಹಾಗೂ ತಂಬಾಕು ಉತ್ಪನ್ನ ಮಾರುತ್ತಿರುವ ಬಗ್ಗೆ ದೂರುಗಳಿವೆ. ಅಬಕಾರಿ ಹಾಗೂ ಇತರೆ ನಿಯಮಗಳನ್ನು ಉಲ್ಲಂಘಿಸುತ್ತಿರುವ ಬಗ್ಗೆ ಮಾಹಿತಿ ಇದೆ. ಹೀಗಾಗಿ, ಪ್ರತಿ ವಾರವೂ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಕಮಿಷನರ್ ಬಿ. ದಯಾನಂದ್ ಹೇಳಿದರು.
‘ಅ. 14 ಹಾಗೂ 15ರಂದು ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಐವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ ಹಾಗೂ ಅಪ್ರಾಪ್ತರಿಗೆ ತಂಬಾಕು ಉತ್ಪನ್ನ ಮಾರುತ್ತಿದ್ದ 965 ಸ್ಥಳಗಳ ವಿರುದ್ಧ ಕ್ರಮ ಜರುಗಿಸಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.