ಬೆಂಗಳೂರು: ಬೆಂಗಳೂರು–ಮೈಸೂರು ವಿಭಾಗದಲ್ಲಿ 2020–21ನೇ ಸಾಲಿನಲ್ಲಿ ಖಾಸಗಿ ಅನುದಾನರಹಿತ ಪ್ರೌಢಶಾಲೆಗಳನ್ನು ನೋಂದಾಯಿಸಲು ಆಡಳಿತ ಮಂಡಗಳಿಗೆ ಏ.8ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಅವಶ್ಯಕ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲು ಮಾ.30ರಿಂದ ಏ.8ರವರೆಗೆ ಸಮಯ ನೀಡಲಾಗಿದೆ. ಶಿಕ್ಷಣ ಸಂಸ್ಥೆಗಳನ್ನು ನೋಂದಾಯಿಸಲು ಬಯಸುವ ಆಡಳಿತ ಮಂಡಳಿಯವರು https://sts.karnataka.gov.in/SCHOOLRR/schoolreg/instruction.htm ಲಾಗಿನ್ ಸಂಪರ್ಕಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.