ಬೆಂಗಳೂರು: ‘ಪುಸ್ತಕೋದ್ಯಮವು ಅತ್ಯಂತ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು,ಸರಕು ಮತ್ತು ಸೇವಾ ತೆರಿಗೆಯನ್ನು(ಜಿಎಸ್‌ಟಿ) ಕೈಬಿಡಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷಮನು ಬಳಿಗಾರ್ ತಿಳಿಸಿದರು.
ಪರಿಷತ್ತಿನ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಿರುವ ಅವರನ್ನು ಕರ್ನಾಟಕ ಪ್ರಕಾಶಕರ ಸಂಘವು ಗುರುವಾರ ಗೌರವಿಸಿತು. ಈ ವೇಳೆ ಮಾತನಾಡಿದ ಅವರು, ‘ಪುಸ್ತಕೋದ್ಯಮದಲ್ಲಿ ಪ್ರಕಾಶಕರು ಮತ್ತು ಲೇಖಕರ ಮೇಲೆ ಜಿಎಸ್‌ಟಿ ಹೇರಿಕೆ ಸರಿಯಲ್ಲ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಜಿಎಸ್‌ಟಿಯನ್ನು ಕೈಬಿಡುವಂತೆ ಸರ್ಕಾರಕ್ಕೆ ಮತ್ತೆ ಮತ್ತೆ ಹಕ್ಕೊತ್ತಾಯ ಮಾಡುತ್ತಲೇ ಬಂದಿದ್ದೇನೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.