ಬೆಂಗಳೂರು: ಬಿಬಿಎಂಪಿ ನೌಕರರ ಕನ್ನಡ ಸಂಘದ ವತಿಯಿಂದ ನ.18ರಂದು ಆಯೋಜಿಸಿರುವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ‘ಕರ್ನಾಟಕ ರತ್ನ ಡಾ. ಪುನೀತ್ ರಾಜ್‌ಕುಮಾರ್ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತದೆ.
ಬಿಬಿಎಂಪಿಯ 20 ನೌಕರರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎ.ಅಮೃತ್ ರಾಜ್ ತಿಳಿಸಿದರು.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಂಜೆ 5ಕ್ಕೆ ನಡೆಯುವ ಕಾರ್ಯಕ್ರಮವನ್ನು ಆಡಳಿತಾಧಿಕಾರಿ ರಾಕೇಶ್ ಸಿಂಗ್ ಉದ್ಘಾಟಿಸಲಿದ್ದು, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಟ ರಮೇಶ್ ಅರವಿಂದ್, ನಟಿಯರಾದ ಭವ್ಯಾ, ಭಾವನಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
‘ರಾಜ್ಯದಲ್ಲಿ ಪ್ರಥಮವಾಗಿ ‘ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಕಂಚಿನ ಪ್ರತಿಮೆ’ಯನ್ನು ಬಿಬಿಎಂಪಿ ಅವರಣದಲ್ಲಿ ಸ್ಥಾಪನೆ ಮಾಡಲಾಗಿದ್ದು, ಕಳೆದ ವರ್ಷದಿಂದ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷರಾದ ಪಾಲನೇತ್ರ, ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಗುರುದತ್ತ, ಚಲನಚಿತ್ರರಂಗದ ಸುಂದರ್ ರಾಜ್, ಪ್ರಮಿಳಾ ಜೋಷಾಯ್, ಶಿವಕುಮಾರ್, ರಿಷಿಗೌಡ, ಪ್ರೇಮಗೌಡ, ರಕ್ಷಾ ಅಪೂರ್ವ, ಪ್ರತಿಭಾ, ರಕ್ಷಾ, ಮಾಧ್ಯಮ ಕ್ಷೇತ್ರದ ರಕ್ಷಾ, ಮಾಲತೇಶ್, ವಸಂತ್ ಕುಮಾರ್, ಸ್ಮಿತಾ ರಂಗನಾಥ್, ಶೀತಲ್ ಶೆಟ್ಟಿ, ಮಂಜುನಾಥ್, ಅಲ್ಲಾವುದ್ದಿನ್, ಪುರುಷೋತ್ತಮ್, ಕೊಂಡಯ್ಯ, ಪುಟ್ಟರಾಜು, ಪಿ.ಆರ್.ಓ. ಸುಚಿತ್ರಾ ಮತ್ತು ಡೊಳ್ಳು ಕುಣಿತ ಕಲಾವಿದ ಡೊಳ್ಳು ಚಂದ್ರು, ಯೋಗ ಕ್ರೀಡಾ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಅಮೃತರಾಜ್ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.