ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಒಂದು ಕೌಂಟರ್‌ನಲ್ಲಿ ಕ್ಯೂಆರ್ ಕೋಡ್ ಆಧಾರಿತ ಯುಪಿಐ ಪಾವತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಶೀಘ್ರದಲ್ಲಿ ಬೆಂಗಳೂರು ವಿಭಾಗದ ಎಲ್ಲ ರೈಲು ನಿಲ್ದಾಣಗಳಿಗೆ ಈ ವ್ಯವಸ್ಥೆ ವಿಸ್ತರಿಸಲಾಗುವುದು ಎಂದು ನೈರುತ್ಯ ರೈಲ್ವೆ ತಿಳಿಸಿದೆ.
ರೈಲ್ವೆ ಬೋರ್ಡ್ ಅನೇಕ ಸುಧಾರಣೆಗಳನ್ನು ತರಲು ನಿರ್ಧರಿಸಿದ್ದು, ಡಿಜಿಟಲ್ ಇಂಡಿಯಾ ಪ್ರೋತ್ಸಾಹಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಕೌಂಟರ್ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಇದರಿಂದ ಸುಲಭಗೊಳ್ಳಲಿದೆ ಎಂದು ನೈರುತ್ಯ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.