ಬೆಂಗಳೂರು: ಟಿಕೆಟ್ ಕೌಂಟರ್‌ಗಳ ಮುಂದೆ ಹಾಗೂ ಪ್ಲಾಟ್ ಫಾರಂಗಳಲ್ಲಿ ಹೆಚ್ಚು ಜನ ಸೇರುವುದನ್ನು ತಡೆಯುವ ಉದ್ದೇಶದಿಂದ ರೈಲ್ವೆ ಇಲಾಖೆಯು ಪ್ಲಾಟ್ ಫಾರಂ ಟಿಕೆಟ್ ದರವನ್ನು ₹10ರಿಂದ ₹50ಕ್ಕೆ ಹೆಚ್ಚಿಸಿದೆ.
ಬೆಂಗಳೂರು ನಗರದ ನಾಲ್ಕು ರೈಲ್ವೆ ನಿಲ್ದಾಣಗಳಲ್ಲಿ ಇದೇ 17ರಿಂದ 30ರವರೆಗೆ ಇದು ಜಾರಿಯಲ್ಲಿರಲಿದೆ.
‘ಪ್ಲಾಟ್ ಫಾರಂ ಟಿಕೆಟ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಇವುಗಳನ್ನು ಕೊಳ್ಳಲು ಜನ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ದರ ಏರಿಕೆಯ ನಿರ್ಧಾರ ಕೈಗೊಳ್ಳಲಾಗಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಯಶವಂತಪುರ, ಬೆಂಗಳೂರು ಕಂಟೋನ್ಮೆಂಟ್ ಮತ್ತು ಕೃಷ್ಣರಾಜಪುರಂ ರೈಲ್ವೆ ನಿಲ್ದಾಣಗಳಲ್ಲಿ ಇದು ಜಾರಿಯಲ್ಲಿರಲಿದೆ’ ಎಂದು ದಕ್ಷಿಣ ರೈಲ್ವೆಯ ಬೆಂಗಳೂರು ವಿಭಾಗದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.