ಬೆಂಗಳೂರು: ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ನ.19ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಹವಾಮಾನ ವೈಪರಿತ್ಯದ ಮುನ್ನೆಚ್ಚರಿಕೆ ಕ್ರಮವಾಗಿ ಮಕ್ಕಳು ಮತ್ತು ಪೋಷಕರಿಗೆ ತೊಂದರೆ ಆಗುವುದನ್ನು ತಪ್ಪಿಸಲು ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಎಸ್‌ಎಸ್‌ಎಲ್‌ಸಿ ವರೆಗಿನ ಶಾಲೆಗಳಿಗೆ ಒಂದು ದಿನ ರಜೆ ಘೋಷಣೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.