ಬೆಂಗಳೂರು: ನಗರದಲ್ಲಿ ಶನಿವಾರ ರಾತ್ರಿ ಮತ್ತು ಭಾನುವಾರ ಭಾರಿ ಮಳೆಯಾಗಿದೆ.
ಬನಶಂಕರಿ 6ನೇ ಹಂತದಲ್ಲಿ ನಿರ್ಮಾಣಗೊಂಡಿರುವ ಶ್ರೀವಾರಿ ಅಪಾರ್ಟ್‌ಮೆಂಟ್‌ನ ಕಾಂಪೌಂಡ್ ಕುಸಿದಿದೆ. ರಾಮಸಂದ್ರ ಹಾಗೂ ಹಿರೇಕೆರೆ ಕೋಡಿ ಬಿದ್ದ ಪರಿಣಾಮ ಕೆಂಗೇರಿ ಸಮೀಪದ ಕೆಂಪೇಗೌಡ ಬಡಾವಣೆಯ ಮೂರು ಮತ್ತು ನಾಲ್ಕನೇ ಹಂತದ ಪ್ರದೇಶಗಳು ಜಲಾವೃತಗೊಂಡಿವೆ.
ನಾಗದೇವನಹಳ್ಳಿ ಬಳಿಯ ರಾಮನಾಥನಗರ ಬಡಾವಣೆಗೆ ಚರಂಡಿ ನೀರು ನುಗ್ಗಿದೆ. ಖೋಡೆ ಅಂಡರ್‌ಪಾಸ್ ಸಹಿತ ಕೆಳಸೇತುವೆಗಳಲ್ಲಿ ನೀರು ನಿಂತು ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ.
ಬನ್ನೇರುಘಟ್ಟ ರಸ್ತೆಯಲ್ಲಿರುವ ನಾರಾಯಣ ನೇತ್ರಾಲಯ ಪಕ್ಕದ ಒ.ಆರ್. ಟೆಕ್ ಟೂಲ್ಸ್ ಕಂಪನಿಗೆ ಹಾಗೂ ಸುತ್ತಮುತ್ತಲಿನ ಬಡಾವಣೆಯಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ.
ಮೈಸೂರು ರಸ್ತೆ ಸೇರಿದಂತೆ ನಗರದ ಹಲವು ರಸ್ತೆಗಳಲ್ಲಿಯೇ ನೀರು ಹರಿದು ಕಾಲುವೆಯಂತಾಗಿದೆ. ಹೊಸತಾಗಿ ಹಾಕಿದ್ದ ಡಾಂಬರು ಕಿತ್ತು ಹೋಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.