ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಶುಕ್ರವಾರ ಹಾಗೂ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಕರಾವಳಿ ವ್ಯಾಪ್ತಿಯ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಚಿಕ್ಕಮಗಳೂರು, ಮೈಸೂರು ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲೂ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಮಳೆಯಾಗಲಿದೆ.
ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಕೊಡಗಿನ ನಾಪೋಕ್ಲು ಸುತ್ತಮುತ್ತ 3 ಸೆಂ.ಮೀ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.