ADVERTISEMENT

ರಾಜ್ಯದಲ್ಲಿ ಮತ್ತೆರಡು ದಿನ ಮಳೆ ಸಂಭವ

​ಪ್ರಜಾವಾಣಿ ವಾರ್ತೆ
Published 8 ಮೇ 2024, 13:58 IST
Last Updated 8 ಮೇ 2024, 13:58 IST
ಮಳೆ
ಮಳೆ   

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಮುಂಗಾರುಪೂರ್ವ ಮಳೆ ಸುರಿಯುತ್ತಿದ್ದು, ಮುಂದಿನ 48 ಗಂಟೆಗಳಲ್ಲಿ ಇದೇ ವಾತಾವರಣ ಮುಂದುವರಿಯಲಿದೆ.

ಹಗಲು ಬಿಸಿಲು, ಮೋಡದ ವಾತಾವರಣ ಇರಲಿದ್ದು, ಸಂಜೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 9ರಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ADVERTISEMENT

ಮುಂದಿನ ಎರಡು ದಿನಗಳಲ್ಲಿ ಇದೇ ವಾತಾವರಣ ಮುಂದುವರಿಯಲಿದ್ದು, ತಾಪಮಾನದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ. ನಂತರ ರಾಜ್ಯದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ.

ಮಳೆ ಪ್ರಮಾಣ: ತುಮಕೂರು ಜಿಲ್ಲೆಯ ಚಿಕ್ಕನಹಳ್ಳಿಯಲ್ಲಿ 4 ಸೆಂಟಿ ಮೀಟರ್‌ ಮಳೆಯಾಗಿದೆ. ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರ, ಕೊಡಗು ಜಿಲ್ಲೆಯ ಹಾರಂಗಿಯಲ್ಲಿ 3 ಸೆಂ.ಮೀ., ಚಿತ್ರದುರ್ಗ ಜಿಲ್ಲೆಯ ಹಿರಿಯೂರು, ಹಾಸನ ಜಿಲ್ಲೆಯ ಬೇಲೂರು, ತುಮಕೂರು ಜಿಲ್ಲೆಯ ವೈ.ಎನ್. ಹೊಸಕೋಟೆಗಳಲ್ಲಿ 2 ಸೆಂ.ಮೀ. ಮಳೆ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.