ADVERTISEMENT

ಏಳು ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 21:39 IST
Last Updated 4 ಆಗಸ್ಟ್ 2021, 21:39 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಆ.5ರಂದು ಈ ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

‘ಕರಾವಳಿ ಜಿಲ್ಲೆಗಳಲ್ಲಿ ಆ.8ರವರೆಗೆ ಯೆಲ್ಲೊ ಅಲರ್ಟ್‌ ಮುಂದುವರಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಒಳನಾಡಿನ ಜಿಲ್ಲೆಗಳಲ್ಲಿ ಇದೇ 8 ರವರೆಗೆ ಮಳೆಯ ಪ್ರಮಾಣ ಕಡಿಮೆ ಇರಲಿದೆ’ ಇದೆ ಎಂದೂ ಮಾಹಿತಿ ನೀಡಿದೆ.

ADVERTISEMENT

ಮಳೆ–ಎಲ್ಲಿ, ಎಷ್ಟು?:ಉಡುಪಿ ಜಿಲ್ಲೆಯ ಸಿದ್ದಾಪುರ ಹಾಗೂ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಬುಧವಾರ 15 ಸೆಂ.ಮೀ ಗರಿಷ್ಠ ಮಳೆಯಾಗಿದೆ. ತೀರ್ಥಹಳ್ಳಿ, ಭಟ್ಕಳ 9, ಸುಳ್ಯ, ಮೂಡುಬಿದರೆ, ಮಡಿಕೇರಿ 5, ಮಂಗಳೂರು, ಬೆಳ್ತಂಗಡಿ, ಕಾರವಾರ, ಸಾಗರ 4, ವಿರಾಜಪೇಟೆ, ಬಂಟ್ವಾಳ 3, ತರೀಕೆರೆ 2, ಧಾರವಾಡ, ಬೆಳಗಾವಿ, ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಯಚೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಹಾಗೂ ಹಾಸನದಲ್ಲಿ 16 ಸೆಂ.ಮೀ ಕನಿಷ್ಠ ತಾಪಮಾನ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.