ADVERTISEMENT

ರಾಜರಾಜೇಶ್ವರಿ ವೈದ್ಯಕೀಯ ಮಹಾವಿದ್ಯಾಲಯ: 401 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2024, 16:04 IST
Last Updated 12 ನವೆಂಬರ್ 2024, 16:04 IST
<div class="paragraphs"><p>ರಾಜರಾಜೇಶ್ವರಿ ವೈದ್ಯಕೀಯ ಮಹಾವಿದ್ಯಾಲಯದ&nbsp;14ನೇ ಘಟಿಕೋತ್ಸವ ಸಮಾರಂಭದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪದವಿ ಪ್ರದಾನ ಮಾಡಿದರು. ಕುಲಪತಿ ಡಾ.ಎ.ಸಿ.ಷಣ್ಮುಗಂ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಿ.ಎನ್. ಸೀತಾರಾಮ್, ವೈದ್ಯಕೀಯ ಅಧೀಕ್ಷಕ ಡಾ.ಪ್ರವೀಣ್ ಕುಮಾರ್, ಪ್ರಾಂಶುಪಾಲ ಡಾ.ಎಸ್.ನವೀನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p></div>

ರಾಜರಾಜೇಶ್ವರಿ ವೈದ್ಯಕೀಯ ಮಹಾವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪದವಿ ಪ್ರದಾನ ಮಾಡಿದರು. ಕುಲಪತಿ ಡಾ.ಎ.ಸಿ.ಷಣ್ಮುಗಂ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಿ.ಎನ್. ಸೀತಾರಾಮ್, ವೈದ್ಯಕೀಯ ಅಧೀಕ್ಷಕ ಡಾ.ಪ್ರವೀಣ್ ಕುಮಾರ್, ಪ್ರಾಂಶುಪಾಲ ಡಾ.ಎಸ್.ನವೀನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

   

ಕೆಂಗೇರಿ: ‘ಆಯುಷ್ಮಾನ್ ಭಾರತ್ ಹಾಗೂ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗಳು ಭಾರತದ ಆರೋಗ್ಯ ಕ್ಷೇತ್ರವನ್ನು ಸದೃಢಗೊಳಿಸುವಲ್ಲಿ ಗುರುತರ ಕೊಡುಗೆ ನೀಡುತ್ತಿವೆ’ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶಂಸೆ ವ್ಯಕ್ತಪಡಿಸಿದರು.

ಕುಂಬಳಗೋಡು ಬಳಿಯ ರಾಜರಾಜೇಶ್ವರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಎಬಿಎಸ್ ಕನ್ವೆನ್ಷನ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ 14ನೇ ಘಟಿಕೋತ್ಸವ ಸಮಾರಂಭದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು

ADVERTISEMENT

ಆರೋಗ್ಯವಂತ ಸಮುದಾಯವೇ ದೇಶದ ನಿಜವಾದ ಆಸ್ತಿ. ಈ ಹಿನ್ನೆಲೆಯಲ್ಲಿ ಆಯುಷ್ಮಾನ್ ಭಾರತ್ ಮೂಲಕ ವೈದ್ಯಕೀಯ ವಿಮೆ ಒದಗಿಸಲಾಗುತ್ತಿದೆ. ಆದಾಯ ಮಿತಿ ಪರಿಗಣಿಸಿದೆ. 70 ವರ್ಷ ಮೇಲ್ಪಟ್ಟ ವಯೋಮಾನದವರೆಲ್ಲರಿಗೂ ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಿಸಿಲಾಗಿದೆ ಎಂದು ಹೇಳಿದರು. ಆರೋಗ್ಯ ಸೇವೆ ಒದಗಿಸುವ ವರ್ಗದವರು ಸೇವಾ ಮನೋಭಾವ ರೂಢಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ರಾಜರಾಜೇಶ್ವರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಸ್ಥಾಪಕ ಕುಲಪತಿ ಡಾ.ಎ.ಸಿ.ಷಣ್ಮುಗಂ ಮಾತನಾಡಿ , ಕಲಿತ ವಿದ್ಯೆಯನ್ನು ಸದುಪಯೋಗಪಡಿಸಿಕೊಳ್ಳಿ. ನಿಮ್ಮ ಯಶಸ್ಸಿನಲ್ಲಿ ಪೋಷಕರು ಹಾಗೂ ಸಮಾಜದ ಪರಿಶ್ರಮವಿದೆ. ಉತ್ತಮಕಾರ್ಯ ಮಾಡುವ ಮೂಲಕ ಋಣ ಸಂದಾಯ ಮಾಡಿ. ಎಂದು ಶುಭಕೋರಿದರು. ಇದೇ ವೇಳೆ 401 ವೈದ್ಯಕೀಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಕಾರ್ಯಕಾರಿ ನಿರ್ದೇಶಕ ಡಾ.ಎಸ್.ವಿಜಯಾನಂದ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಿ.ಎನ್. ಸೀತಾರಾಮ್, ವೈದ್ಯಕೀಯ ಅಧೀಕ್ಷಕ ಡಾ.ಪ್ರವೀಣ್‌ಕುಮಾರ್, ಪ್ರಾಂಶುಪಾಲ ಡಾ.ಎಸ್.ನವೀನ್, ಉಪಪ್ರಾಂಶುಪಾಲ ಡಾ.ಬಸವರಾಜ ಭಂಡಾರೆ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.