ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ 2 ಸಾವಿರಕ್ಕೂ ಅಧಿಕ ಕಲಾವಿದರ ಪರವಾಗಿ 8 ಸಾವಿರಕ್ಕೂ ಹೆಚ್ಚು ಶಿಫಾರಸುಗಳು ಸಲ್ಲಿಕೆಯಾಗಿವೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಹೆಸರನ್ನು ನಾಮನಿರ್ದೇಶನ ಮಾಡಲು ಸೆಪ್ಟೆಂಬರ್ 1ರಿಂದ ಸೆ.30ರವರೆಗೆ ಅವಕಾಶ ಕಲ್ಪಿಸಿತ್ತು. ಕರ್ನಾಟಕ ರಾಜ್ಯೋತ್ಸವದ 69ನೇ ವರ್ಷಾಚರಣೆ ಅಂಗವಾಗಿ ಈ ಬಾರಿ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ.
ಸೇವಾ ಸಿಂಧು ಪೋರ್ಟಲ್ ಮೂಲಕ ಏಳು ಸಾವಿರಕ್ಕೂ ಅಧಿಕ ಹಾಗೂ ನೇರವಾಗಿ 800 ಅರ್ಜಿಗಳು ಸಲ್ಲಿಕೆಯಾಗಿವೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯ ಸಮಿತಿ ಪರಿಶೀಲನೆ ನಡೆಸಿ, ಸಾಧಕರನ್ನು ಆಯ್ಕೆ ಮಾಡಲಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಪ್ರಶಸ್ತಿಯು ತಲಾ ₹ 5 ಲಕ್ಷ ನಗದು ಹಾಗೂ 25 ಗ್ರಾಂ. ಚಿನ್ನದ ಪದಕ ಒಳಗೊಂಡಿರಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.