ADVERTISEMENT

ಶಾಲಾ ಪ್ರವೇಶಕ್ಕೆ 6 ವರ್ಷ: ಕಾಂಗ್ರೆಸ್‌ ವಿರೋಧ

​ಪ್ರಜಾವಾಣಿ ವಾರ್ತೆ
Published 27 ಜುಲೈ 2022, 20:08 IST
Last Updated 27 ಜುಲೈ 2022, 20:08 IST
ರಮೇಶ ಬಾಬು
ರಮೇಶ ಬಾಬು   

ಬೆಂಗಳೂರು:‌ ‘ಒಂದನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್ 1ಕ್ಕೆ ಆರು ವರ್ಷ ಪೂರ್ಣವಾಗಿರಬೇಕೆಂದು ಹೊರಡಿಸಿರುವ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು’ ಎಂದು ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಆಗ್ರಹಿಸಿದರು.

‘ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಸಂಗ್ರಹಿಸದೆ ಈ ಆದೇಶ ಹೊರಡಿಸಲಾಗಿದೆ. ಇದರಿಂದ ಪೋಷಕರು, ಶಿಕ್ಷಕರು ಗೊಂದಲಕ್ಕೀಡಾಗಿದ್ದಾರೆ’ ಎಂದರು.

‘ಶಿಕ್ಷಣ ಇಲಾಖೆಯು ಪ್ರಸಕ್ತ ಶೈಕ್ಷಣಿಕ ವರ್ಷವನ್ನು ಮೇ ತಿಂಗಳಿನಿಂದಲೇ ಘೋಷಿಸಿದ್ದು, ಈಗಾಗಲೇ ತ್ರೈಮಾಸಿಕ ಅವಧಿ ಮುಕ್ತಾಯವಾಗಿದೆ. ಆದರೆ, ಈಗ ಆದೇಶ ಹೊರಡಿಸಲಾಗಿದೆ. ‌ಈ ವರ್ಷದಿಂದಲೇ ಈ ಆದೇಶ ಜಾರಿಗೆ ಬರಲಿದೆಯೇ ಅಥವಾ ಮುಂದಿನ ವರ್ಷದಿಂದ ಜಾರಿ ಆಗಲಿದೆಯೇ ಎಂಬ ಬಗ್ಗೆಯೂ ಆದೇಶದಲ್ಲಿ ಸ್ಪಷ್ಟತೆ ಇಲ್ಲ. ಹೀಗಾಗಿ, ಸಾರ್ವಜನಿಕರ ಹಿತದೃಷ್ಟಿಯಿಂದ ಈ ಆದೇಶವನ್ನು ಹಿಂಪಡೆಯಬೇಕು’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.