ADVERTISEMENT

Rameshwaram Cafe Blast: ಎನ್‌ಐಎ, ಐಬಿಗೆ ಮಾಹಿತಿ: ಅಲೋಕ್‌ ಮೋಹನ್

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2024, 12:03 IST
Last Updated 1 ಮಾರ್ಚ್ 2024, 12:03 IST
<div class="paragraphs"><p>Rameshwaram Cafe</p></div>

Rameshwaram Cafe

   

ಬೆಂಗಳೂರು: ‘ದಿ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವ ಸ್ಫೋಟದ ಬಗ್ಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಹಾಗೂ ಕೇಂದ್ರ ಗುಪ್ತಚರ (ಐಬಿ) ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್ ಹೇಳಿದರು.

ಸ್ಫೋಟ ಸಂಭವಿಸಿದ್ದ ಸ್ಥಳಕ್ಕೆ ಭೇಟಿ ನೀಡಿದ್ದ ಅವರು, ಪರಿಶೀಲನೆ ನಡೆಸಿದರು.

ADVERTISEMENT

ಪರಿಶೀಲನೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸ್ಫೋಟಕ್ಕೆ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಅವರಿಂದ ವರದಿ ಬಂದ ನಂತರ, ಖಚಿತ ಮಾಹಿತಿ ತಿಳಿಯಲಿದೆ’ ಎಂದರು.

‘ಗ್ರಾಹಕರು ಏನಾದರೂ ತಂದಿದ್ದರಾ? ಇಲ್ಲ ಬೇರೆ ಏನಾದರೂ ಕಾರಣವಿದೆಯಾ? ಎಂಬುದನ್ನು ಸದ್ಯಕ್ಕೆ ಹೇಳಲಾಗದು’ ಎಂದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.