ಬೆಂಗಳೂರು: ‘ರಣಂ’ ಸಿನಿಮಾ ಚಿತ್ರೀಕರಣ ವೇಳೆ ಸಿಲಿಂಡರ್ ಸ್ಫೋಟ ಸಂಭವಿಸಿ ತಾಯಿ– ಮಗಳು ಮೃತಪಟ್ಟ ಸಂಬಂಧ ಬಾಗಲೂರು ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಭೀಮಾಶಂಕರ್ ಅವರನ್ನು ಅಮಾನತು ಮಾಡಲಾಗಿದೆ.
‘ವಿಶೇಷ ಕರ್ತವ್ಯದ ತಂಡದಲ್ಲಿದ್ದ ಭೀಮಾಶಂಕರ್ ಕರ್ತವ್ಯ ಲೋಪ ಎಸಗಿರುವುದು ಇಲಾಖೆಯ ಆಂತರಿಕ ತನಿಖೆಯಿಂದ ಗೊತ್ತಾಗಿದೆ. ಅಷ್ಟೇ ಅಲ್ಲ, ಘಟನೆ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿ ಹಿರಿಯ ಅಧಿಕಾರಿಗಳಿಗೆ ವರದಿ ನೀಡಿಲ್ಲ ಎಂಬ ಕಾರಣಕ್ಕೆ ಅಮಾನತು ಮಾಡಲಾಗಿದೆ’ ಎಂದು ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು. ‘ಅನುಮತಿ ಇಲ್ಲದೇ ತಂಡ ಚಿತ್ರೀಕರಣ ನಡೆಸಿದೆ. ಭೀಮಾಶಂಕರ್ ಈ ಬಗ್ಗೆ ಮಾಹಿತಿ ನೀಡಿರಲಿಲ್ಲ’ ಎಂದೂ ಅವರು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.