ADVERTISEMENT

ಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ: ಅ. 21ಕ್ಕೆ ಆದೇಶ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 15:26 IST
Last Updated 19 ಅಕ್ಟೋಬರ್ 2024, 15:26 IST
ಪ್ರಜ್ವಲ್‌ ರೇವಣ್ಣ
ಪ್ರಜ್ವಲ್‌ ರೇವಣ್ಣ   

ಬೆಂಗಳೂರು: ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಜೆಡಿಎಸ್‌ನ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳ ಮೇಲಿನ ಆದೇಶವನ್ನು ಹೈಕೋರ್ಟ್ ಇದೇ 21ಕ್ಕೆ ಪ್ರಕಟಿಸಲಿದೆ.

ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ ಅರ್ಜಿಗಳನ್ನು ವಿಚಾರಣೆ ನಡೆಸಿ ಕಾಯ್ದಿರಿಸಲಾಗಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಲಿದೆ.

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್ ನಲ್ಲಿ ದಾಖಲಾಗಿದ್ದ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದಾರೆ.

ADVERTISEMENT

ಪ್ರಜ್ವಲ್ ರೇವಣ್ಣ ಅವರು ನಾಲ್ಕು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.