ಬೆಂಗಳೂರು: ಏಡ್ಸ್ ನಿಯಂತ್ರಣ ಮತ್ತು ಜಾಗೃತಿಗಾಗಿ ರೆಡ್ ರಿಬ್ಬನ್ ಮ್ಯಾರಥಾನ್ ಕಾರ್ಯಕ್ರಮ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ನಡೆಯಿತು.
ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಬಿಬಿಎಂಪಿ ಹಾಗೂ ಲಯನ್ಸ್ ಕ್ಲಬ್ ಜಿಲ್ಲೆ 317ಎ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಈ ಮ್ಯಾರಥಾನ್‌ಗೆ ನಟ ಗಣೇಶ ರಾವ್ ಕೇಸರ್ಕರ್ ಹಾಗೂ ಲಯನ್ಸ್ ಡೆಪ್ಯುಟಿ ಗವರ್ನರ್ ಈಶ್ವರನ್ ಚಾಲನೆ ನೀಡಿದರು.
ಎಚ್‌ಐವಿ/ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯ ಹೋಗಲಾಡಿಸುವ ಕ್ರಮಗಳು, ಎಚ್‌ಐವಿ/ಏಡ್ಸ್ ತಡೆ ಕಾಯ್ದೆ - 2017, ನ್ಯಾಕೋ ಏಡ್ಸ್ ಆ್ಯಪ್, ಉಚಿತ ರಾಷ್ಟ್ರೀಯ ಸಹಾಯವಾಣಿ - 1097, ಎಸ್‌ಟಿಐ ಬಗ್ಗೆ ಅರಿವು ಮೂಡಿಸಲಾಯಿತು.
ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕಿ ಶಶಿಕಲಾ, ಸಹಾಯಕ ಯೋಜನಾ ನಿರ್ದೇಶಕಿ ಉಮಾ ಬುಗ್ಗಿ ಹಾಗೂ ಲಯನ್ಸ್‌ನ ಮನೋಜ್ ಕುಮಾರ್ ವಿಜೇತರಿಗೆ ಬಹುಮಾನ ವಿತರಿಸಿದರು.
ಲಯನ್ಸ್ ಕಾರ್ಯದರ್ಶಿ ರಾಮಚಂದ್ರ, ಏಡ್ಸ್ ನಿಯಂತ್ರಣ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳಾದ ಡಾ. ರಮೇಶ್, ಡಾ. ಕೋಮಲಾ, ಜಿಲ್ಲಾ ಮೇಲ್ವಿಚಾರಕರಾದ ಡಿ.ಎಂ ಯಶೋದಾ, ಹನುಮಂತರಾಯಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ರೇವಣ್ಣ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.