ADVERTISEMENT

ಬಿಸಿಯೂಟ ತಯಾರಕರಿಗೆ ಸಂಭಾವನೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2020, 21:01 IST
Last Updated 21 ಆಗಸ್ಟ್ 2020, 21:01 IST
   

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ವ್ಯಾಪ್ತಿಯಡಿ ಕೆಲಸ ನಿರ್ವಹಿಸುವ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡುಗೆ ಸಿಬ್ಬಂದಿಗೆ ಮೂರು ತಿಂಗಳ ಸಂಭಾವನೆ ನೀಡಲು ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

1,17,999 ಅಡುಗೆ ಸಿಬ್ಬಂದಿಗೆ ಜೂನ್, ಜುಲೈ ಹಾಗೂ ಆಗಸ್ಟ್‌ ತಿಂಗಳ ಸಂಭಾವನೆ ನೀಡಲು ₹93.46 ಕೋಟಿಯನ್ನು ಬಿಡುಗಡೆ ಮಾಡಲು ಅನುಮತಿಸಲಾಗಿದೆ ಎಂದು ಆರ್ಥಿಕ ಇಲಾಖೆ ಆದೇಶ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT