ADVERTISEMENT

ರೇಣುಕಸ್ವಾಮಿ ಕೊಲೆ ಪ್ರಕರಣ: ತನಿಖಾಧಿಕಾರಿ ದಿಢೀರ್ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2024, 9:06 IST
Last Updated 14 ಜೂನ್ 2024, 9:06 IST
<div class="paragraphs"><p>ಪೊಲೀಸರ ವಶದಲ್ಲಿ ದರ್ಶನ್</p></div>

ಪೊಲೀಸರ ವಶದಲ್ಲಿ ದರ್ಶನ್

   

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಯಾದ ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಪ್ರಕರಣದ ತನಿಖೆ ಹೊಣೆಯನ್ನು ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ವಹಿಸಿಕೊಂಡಿದ್ದಾರೆ.

ವರ್ಗಾವಣೆ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಯೊಬ್ಬರು, ‘ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯ ಇನ್‌ಸ್ಪೆಕ್ಟರ್ ಆಗಿದ್ದ ಗಿರೀಶ್ ಅವರನ್ನು ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಠಾಣೆಗೆ ತಾತ್ಕಾಲಿಕವಾಗಿ ವರ್ಗಾಯಿಸಲಾ
ಗಿತ್ತು. ಇದೀಗ, ಅವರನ್ನು ಪುನಃ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ವರ್ಗಾಯಿಸಲಾಗಿದೆ. ಇದು, ಸಹಜ ವರ್ಗಾವಣೆ ಹೊರತು ದಿಢೀರ್ ವರ್ಗಾವಣೆಯಲ್ಲ’ ಎಂದರು.

ADVERTISEMENT

ಇನ್ನೊಬ್ಬ ಅಧಿಕಾರಿ, ‘ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪುವವರೆಗೂ ಗಿರೀಶ್ ಅವರನ್ನು ಇನ್‌ಸ್ಪೆಕ್ಟರ್ ಹುದ್ದೆಯಲ್ಲಿ ಮುಂದುವರಿಸಲು ಸಾಕಷ್ಟು ಅವಕಾಶಗಳಿವೆ. ಇಂಥ ಸೂಕ್ಷ್ಮ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ದಿಢೀರ್ ವರ್ಗಾವಣೆ ಅಗತ್ಯವಿರಲಿಲ್ಲ. ಹಿರಿಯ ಅಧಿಕಾರಿಗಳು ಹಾಗೂ ಗೃಹ ಸಚಿವರು, ವರ್ಗಾವಣೆ ರದ್ದುಪಡಿಸಲು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.