ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ.
ತಾಂತ್ರಿಕ ಸಾಕ್ಷ್ಯಾಧಾರ ಕಲೆ ಹಾಕಿರುವ ಪೊಲೀಸರು, ಆರೋಪ ಪಟ್ಟಿ ಸಲ್ಲಿಕೆಗೆ ಸಿದ್ಧತೆಯಲ್ಲಿ ತೊಡಗಿದ್ದಾರೆ. ಈ ಪ್ರಕರಣದಲ್ಲಿ ಹಲವರನ್ನು ಸಾಕ್ಷೀದಾರರನ್ನಾಗಿ ಮಾಡಲಾಗಿದ್ದು, ನ್ಯಾಯಾಧೀಶರ ಎದುರು ಅವರ ಹೇಳಿಕೆ ದಾಖಲಿಸಿದ್ದಾರೆ.
ಆರೋಪಿಗಳಿಂದ ಜಪ್ತಿ ಮಾಡಿದ್ದ ಮೊಬೈಲ್, ಕೃತ್ಯ ನಡೆದ ಸ್ಥಳದಲ್ಲಿ ಜಪ್ತಿ ಮಾಡಲಾದ ಸಿ.ಸಿ ಟಿ.ವಿ. ಕ್ಯಾಮೆರಾದ ಡಿವಿಆರ್ ಹಾಗೂ ಬಟ್ಟೆಗಳನ್ನು ಬೆಂಗಳೂರು ಹಾಗೂ ಹೈದರಾಬಾದ್‌ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ(ಎಫ್‌ಎಸ್‌ಎಲ್) ರವಾನೆ ಮಾಡಲಾಗಿತ್ತು. ಎಫ್‌ಎಸ್‌ಎಲ್‌ನಿಂದ ಶೇ 70ರಷ್ಟು ವರದಿಗಳು ತನಿಖಾಧಿಕಾರಿಗಳ ಕೈಸೇರಿವೆ. ಇನ್ನು ಶೇ 30ರಷ್ಟು ವರದಿಗಳು ಬರಬೇಕಿವೆ ಎಂದು ಮೂಲಗಳು ತಿಳಿಸಿವೆ.
ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ನಡೆಸಿದ್ದ ಪಾರ್ಟಿಯಲ್ಲಿ ನಟ ದರ್ಶನ್ ಜೊತೆಗೆ ನಟ ಯಶಸ್ ಸೂರ್ಯ ಕೂಡ ಭಾಗಿಯಾಗಿದ್ದರು. ಹೀಗಾಗಿ, ಯಶಸ್ ಸೂರ್ಯ ಅವರಿಂದ ನ್ಯಾಯಾಧೀಶರ ಎದುರು ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.