ಬೆಂಗಳೂರು: ಹಾರೋಹಳ್ಳಿ ಹಾಗೂ ಟಿ.ಕೆ ಹಳ್ಳಿಯಲ್ಲಿರುವ ಬೆಂಗಳೂರು ಜಲಮಂಡಳಿ ಪಂಪಿಂಗ್ ಸ್ಟೇಷನ್‌ಗಳಿಗೆ ವಿದ್ಯುತ್ ಪೂರೈಸುವ ಟ್ರಾನ್ಸ್‌ಫಾರ್ಮರ್‌ಗಳು ಬುಧವಾರ ರಾತ್ರಿ ಸುರಿದ ಭಾರಿ ಮಳೆ ಮತ್ತು ಸಿಡಿಲಿನ ಹೊಡೆತದಿಂದ ಹಾಳಾಗಿದ್ದವು. ಕೆಪಿಟಿಸಿಎಲ್ ತುರ್ತು ದುರಸ್ತಿ ಕಾಮಗಾರಿ ಕೈಗೊಂಡಿದ್ದು, ವಿದ್ಯುತ್ ಪೂರೈಕೆ ಪುನರಾರಂಭವಾಗಿದೆ.
ಪಂಪಿಂಗ್ ಸ್ಟೇಷನ್‌ಗಳಿಗೆ ವಿದ್ಯುತ್ ಸಂಪರ್ಕ ನೀಡುತ್ತಿದ್ದ ಲೈನ್‌ಗಳಿಗೆ ಬುಧವಾರ ರಾತ್ರಿ 11 ಗಂಟೆಗೆ ಸಿಡಿಲು ಬಡಿದಿದ್ದರಿಂದ ಟ್ರಾನ್ಸ್‌ಫಾರ್ಮರ್‌ಗಳಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿತ್ತು. ಈ ಅವಘಡದಿಂದಾಗಿ ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಪ್ರಮುಖ ಪಂಪಿಂಗ್ ಸ್ಟೇಷನ್ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿತ್ತು. ನೀರು ಪಂಪಿಂಗ್ ಸ್ಥಗಿತಗೊಂಡಿತ್ತು.
ಕೆಪಿಟಿಸಿಎಲ್ ಹಾಗೂ ಬೆಂಗಳೂರು ಜಲಮಂಡಳಿ ಸಿಬ್ಬಂದಿ ಸಮನ್ವಯದಿಂದ ರಾತ್ರಿ ಮಳೆಯಲ್ಲೇ ತುರ್ತು ದುರಸ್ತಿ ಕಾಮಗಾರಿಯನ್ನು ಆರಂಭಿಸಿದ್ದರು. ಸತತ ಪ್ರಯತ್ನದಿಂದ ತಾಂತ್ರಿಕ ಸಮಸ್ಯೆ ನಿವಾರಿಸಿದ್ದಾರೆ. ಸುಮಾರು 10 ಗಂಟೆ ವಿದ್ಯುತ್ ಇಲ್ಲದೇ ನೀರು ಸರಬರಾಜು ಸ್ಥಗಿತಗೊಂಡಿದ್ದು, ಹಲವು ಪ್ರದೇಶಗಳಿಗೆ ನೀರು ಪೂರೈಕೆ ವ್ಯತ್ಯಯವಾಗಿತ್ತು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.