ಬೆಂಗಳೂರು: ಪತ್ರಿಕಾ ವಿತರಕರ ಶ್ರೇಯೋಭಿವೃದ್ಧಿಗೆ ರಾಜ್ಯದ ಮುಂದಿನ ಬಜೆಟ್‌ನಲ್ಲಿ ₹5 ಕೋಟಿ ಮೀಸಲಿಡುವಂತೆ ಕೋರಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ರಾಜ್ಯ ಪತ್ರಿಕಾ ವಿತರಕರು ಶನಿವಾರ ಮನವಿ ಸಲ್ಲಿಸಿದರು. ಒಕ್ಕೂಟದ ರಾಜ್ಯ ಅಧ್ಯಕ್ಷ ಕೆ.ಶಂಭುಲಿಂಗ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಪತ್ರಿಕಾ ವಿತರಣೆ ಕೆಲಸದಲ್ಲಿ 60 ವರ್ಷ ಮೇಲ್ಪಟ್ಟ ಅನೇಕ ಮಂದಿ ಕೆಲಸ ಮಾಡುತ್ತಿದ್ದಾರೆ. ‘ಇ–ಶ್ರಮ್’ ಯೋಜನೆಯಲ್ಲಿ ವಿತರಕರ ವಯೋಮಿತಿಯನ್ನು 59 ವರ್ಷದಿಂದ 75 ವರ್ಷಕ್ಕೆ ಏರಿಸಬೇಕು. ವಿತರಕರಿಗಾಗಿ ಸಮುದಾಯ ಭವನ ನಿರ್ಮಿಸಲು ಜಾಗ, ವಿತರಕರಿಗೆ ನಿವೇಶನ, ಎಲೆಕ್ಟ್ರಿಕ್ ಬೈಕ್ ಉಚಿತವಾಗಿ ನೀಡಬೇಕು ಎಂದು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.